Mysore
15
overcast clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಕಂಪನಿಗಳಿಗೆ ಬುಧವಾರ ಮುಂಜಾನೆ ಆದಾಯ ತೆರಿಗೆ ಇಲಾಖೆ ಶಾಕ್‌  ನೀಡಿದೆ. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ನಗರದ ಸರ್‌ ಸಿ.ವಿ. ರಾಮನ್‌ ನಗರ, ಬಾಗಮನೆ ಟೆಕ್‌ ಪಾರ್ಕ್‌, ಹುಳಿಮಾವು ಮೊದಲಾದ ಕಡೆಗಳಲ್ಲಿ ದಾಳಿ ನಡೆದಿದೆ. ಸುಮಾರು 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ನಾನಾ ಕಡೆ ದಾಳಿ ಮಾಡಿದೆ.

ಹುಳಿಮಾವು ಸಮೀಪದ ಆಪಸ್ ಅಪಾರ್ಟ್ಮೆಂಟ್ ಮೇಲೆ ದಾಳಿ‌ ಮಾಡಿರುವ ಐಟಿ ಟೀಂ ಅಲ್ಲಿ ತಪಾಸಣೆಯನ್ನು ನಡೆಸುತ್ತಿದೆ. ಅಲ್ಲದೆ ಹಲವು ಕಡೆಗಳಲ್ಲಿ ದಾಳಿ ನಡೆದಿರುವ ಮಾಹಿತಿ ಇದೆ.ಆದಾಯ ತೆರಿಗೆ ಪಾವತಿಯಲ್ಲಿ ಕೆಲವು ಕಂಪನಿಗಳು ವಂಚನೆ ಮಾಡುತ್ತಿವೆ ಎಂಬುದನ್ನು ಕಂಡುಕೊಂಡಿರುವ ಅಧಿಕಾರಿಗಳು ಕಂಪನಿಯ ದಾಖಲೆ, ಕಡತಗಳ ಪರಿಶೀಲನೆಗಾಗಿ ಈ ದಾಳಿ ನಡೆಸಿವೆ. ತಂಡಗಳು ಕಂಪನಿಗಳ ಕಚೇರಿಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿವುದಾಗಿ ತಿಳಿದು ಬಂದಿದೆ.

IT raid at Bengaluru

ನಿನ್ನೆ ಮಂಗಳವಾರ ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ 62.05 ಕೋಟಿ‌ ಮೌಲ್ಯದ ಸರ್ಕಾರಿ ಭೂಮಿ‌ ಜಪ್ತಿ ಮಾಡಿಕೊಂಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!