ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಕಂಪನಿಗಳಿಗೆ ಬುಧವಾರ ಮುಂಜಾನೆ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ನಗರದ ಸರ್ ಸಿ.ವಿ. ರಾಮನ್ ನಗರ, ಬಾಗಮನೆ ಟೆಕ್ ಪಾರ್ಕ್, ಹುಳಿಮಾವು ಮೊದಲಾದ ಕಡೆಗಳಲ್ಲಿ ದಾಳಿ ನಡೆದಿದೆ. ಸುಮಾರು 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ನಾನಾ ಕಡೆ ದಾಳಿ ಮಾಡಿದೆ.
ಹುಳಿಮಾವು ಸಮೀಪದ ಆಪಸ್ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿರುವ ಐಟಿ ಟೀಂ ಅಲ್ಲಿ ತಪಾಸಣೆಯನ್ನು ನಡೆಸುತ್ತಿದೆ. ಅಲ್ಲದೆ ಹಲವು ಕಡೆಗಳಲ್ಲಿ ದಾಳಿ ನಡೆದಿರುವ ಮಾಹಿತಿ ಇದೆ.ಆದಾಯ ತೆರಿಗೆ ಪಾವತಿಯಲ್ಲಿ ಕೆಲವು ಕಂಪನಿಗಳು ವಂಚನೆ ಮಾಡುತ್ತಿವೆ ಎಂಬುದನ್ನು ಕಂಡುಕೊಂಡಿರುವ ಅಧಿಕಾರಿಗಳು ಕಂಪನಿಯ ದಾಖಲೆ, ಕಡತಗಳ ಪರಿಶೀಲನೆಗಾಗಿ ಈ ದಾಳಿ ನಡೆಸಿವೆ. ತಂಡಗಳು ಕಂಪನಿಗಳ ಕಚೇರಿಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿವುದಾಗಿ ತಿಳಿದು ಬಂದಿದೆ.
ನಿನ್ನೆ ಮಂಗಳವಾರ ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ 62.05 ಕೋಟಿ ಮೌಲ್ಯದ ಸರ್ಕಾರಿ ಭೂಮಿ ಜಪ್ತಿ ಮಾಡಿಕೊಂಡಿದ್ದರು.
ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು…
ಬೆಂಗಳೂರು : ಬೆಳಗಾವಿ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ…
ಮುಂಬೈ : ಬಾಲಿವುಡ್, ಟಾಲಿವುಡ್, ಸ್ಯಾಂಡಲ್‌ವುಡ್ ಸೇರಿದಂತೆ ಎಲ್ಲಾ ವುಡ್‌ಗಳಲ್ಲಿಯೂ ಧುರಂಧರ್‌ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್…
ಬೆಂಗಳೂರು : ಅಧಿಕಾರ ಹಸ್ತಾಂತರದ ವಿಚಾರದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೈಡ್ರಾಮ ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು…
ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.…
ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.…