ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇ ನಲ್ಲಿ ಅಪಘಾತಗಳು ಹೆಚ್ಚಾಗಿರುವುದರ ಬಗ್ಗೆ ಪರಿಶೀಲನೆ ನಡೆಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ವಿಶೇಷ ಸಮಿತಿಯೊಂದನ್ನು ರಚನೆ ಮಾಡಿದೆ.
ಮೂವರು ತಜ್ಞರನ್ನೊಳಗೊಂಡ ಸಮಿತಿ ಇದಾಗಿದೆ. ರಸ್ತೆ ಸುರಕ್ಷತೆ ಸಲಹೆಗಾರ ಸುದರ್ಶನ್ ಕೆ.ಪೊಪ್ತಿ, ಎನ್ಹೆಚ್ಎಐ ಉಪ ವ್ಯವಸ್ಥಾಪಕ ಪ್ರವೀಣ್ ಕುಮಾರ್, ಜೈವರ್ಧನ್ ಸಿಂಗ್ ಅವರು ಸಮಿತಿಯ ಸದಸ್ಯರಾಗಿದ್ದಾರೆ.
ಈ ಸಮಿತಿಯು ಜುಲೈ 20 ರೊಳಗೆ ಎಕ್ಸ್‌ಪ್ರೆಸ್ ಹೈವೇಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿ 10 ದಿನದೊಳಗೆ ವರದಿ ನೀಡುವಂತೆ ಪ್ರಾಧಿಕಾರದ ರಸ್ತೆ ಸುರಕ್ಷತೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುನೀಲ್ ಜಿಂದಾಲ್ ಸಮಿತಿಗೆ ಸೂಚನೆ ನೀಡಿದ್ದಾರೆ.
ಕಳೆದ 9 ತಿಂಗಳಿನಲ್ಲಿ ಎಕ್ಸ್‌ಪ್ರೆಸ್ ಹೈವೇಯಲ್ಲಿ 550ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳಲ್ಲಿ ಮೃತಪಟ್ಟವರ ಬಗ್ಗೆ ಮಾಹಿತಿ ನೀಡುವಂತೆಯೂ ಪ್ರಾಧಿಕಾರ ಆದೇಶಿಸಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…