ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 7 ರೂ. ಹೆಚ್ಚಿಸಿವೆ. ಮೂರು ತಿಂಗಳ ಬಳಿಕ ಕಮರ್ಷಿಯಲ್ ಬಳಕೆ ಸಿಲಿಂಡರ್ ಬೆಲೆ ಏರಿಕೆಯಾಗಿದೆ.
19 ಕೆಜಿ ಸಿಲಿಂಡರ್ ಬೆಲೆಯಲ್ಲಿ 7 ರೂಪಾಯಿ ಏರಿಕೆಯಾಗಿದೆ. ಪ್ರತಿ ಸಿಲಿಂಡರ್‌ಗೆ 1,773 ರೂ. ಇದ್ದದ್ದು, ಈಗ 1,780 ರೂ.ಗೆ ಹೆಚ್ಚಳವಾಗಿದೆ. ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (ಬಿಪಿಸಿಎಲ್), ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (ಎಚ್‌ಪಿಸಿಎಲ್), ಎಲ್ಲಾ ಸರ್ಕಾರಿ ಸ್ವಾಮ್ಯದ ಕಂಪನಿಗಳು ಹಿಂದಿನ ತಿಂಗಳ ಸರಾಸರಿ ಅಂತರರಾಷ್ಟ್ರೀಯ ಬೆಲೆಗಳನ್ನು ಆಧರಿಸಿ ಅಡುಗೆ ಅನಿಲದ ಬೆಲೆಗಳನ್ನು ಮಾಸಿಕವಾಗಿ ಸರಿಹೊಂದಿಸುತ್ತವೆ.
ಈ ವರ್ಷದ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಸತತ ಕಡಿತದ ನಂತರ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ಗೆ ಮೊದಲ ಬೆಲೆ ಏರಿಕೆಯಾಗಿದೆ.
ಮೇ ತಿಂಗಳಲ್ಲಿ, ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ದೆಹಲಿಯಲ್ಲಿ 171.5 ರೂ.ನಷ್ಟು ಕಡಿಮೆ ಮಾಡಿತ್ತು. ಹೀಗಾಗಿ ಪ್ರತಿ ಸಿಲಿಂಡರ್ ಬೆಲೆ 2,028 ರೂ. ಇದ್ದದ್ದು, 1,856.5 ರೂ.ಗೆ ಆಗಿತ್ತು.