BREAKING NEWS

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆ

ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ಕಮರ್ಷಿಯಲ್‌ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 7 ರೂ. ಹೆಚ್ಚಿಸಿವೆ. ಮೂರು ತಿಂಗಳ ಬಳಿಕ ಕಮರ್ಷಿಯಲ್‌ ಬಳಕೆ ಸಿಲಿಂಡರ್‌ ಬೆಲೆ ಏರಿಕೆಯಾಗಿದೆ.

19 ಕೆಜಿ ಸಿಲಿಂಡರ್‌ ಬೆಲೆಯಲ್ಲಿ 7 ರೂಪಾಯಿ ಏರಿಕೆಯಾಗಿದೆ. ಪ್ರತಿ ಸಿಲಿಂಡರ್‌ಗೆ 1,773 ರೂ. ಇದ್ದದ್ದು, ಈಗ 1,780 ರೂ.ಗೆ ಹೆಚ್ಚಳವಾಗಿದೆ. ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (ಬಿಪಿಸಿಎಲ್), ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (ಎಚ್‌ಪಿಸಿಎಲ್), ಎಲ್ಲಾ ಸರ್ಕಾರಿ ಸ್ವಾಮ್ಯದ ಕಂಪನಿಗಳು ಹಿಂದಿನ ತಿಂಗಳ ಸರಾಸರಿ ಅಂತರರಾಷ್ಟ್ರೀಯ ಬೆಲೆಗಳನ್ನು ಆಧರಿಸಿ ಅಡುಗೆ ಅನಿಲದ ಬೆಲೆಗಳನ್ನು ಮಾಸಿಕವಾಗಿ ಸರಿಹೊಂದಿಸುತ್ತವೆ.

ಈ ವರ್ಷದ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಸತತ ಕಡಿತದ ನಂತರ ಕಮರ್ಷಿಯಲ್‌ ಎಲ್‌ಪಿಜಿ ಸಿಲಿಂಡರ್‌ಗೆ ಮೊದಲ ಬೆಲೆ ಏರಿಕೆಯಾಗಿದೆ.

ಮೇ ತಿಂಗಳಲ್ಲಿ, ಕಮರ್ಷಿಯಲ್‌ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ದೆಹಲಿಯಲ್ಲಿ 171.5 ರೂ.ನಷ್ಟು ಕಡಿಮೆ ಮಾಡಿತ್ತು. ಹೀಗಾಗಿ ಪ್ರತಿ ಸಿಲಿಂಡರ್‌ ಬೆಲೆ 2,028 ರೂ. ಇದ್ದದ್ದು, 1,856.5 ರೂ.ಗೆ ಆಗಿತ್ತು.

lokesh

Recent Posts

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

5 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

9 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

18 mins ago

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago