BREAKING NEWS

ಅಂಚೆ ಉಳಿತಾಯ ಯೋಜನೆಗೆ ಹೆಚ್ಚಿದ ಆಕರ್ಷಣೆ : ಬಡ್ಡಿ ದರ ಸತತ ಏರಿಕೆಯ ಪರಿಣಾಮ

ನವದೆಹಲಿ : ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಕೇಂದ್ರ ಸರ್ಕಾರವು ಸತತ ಮೂರು ತ್ರೈಮಾಸಿಕಗಳಲ್ಲಿ ಹೆಚ್ಚು ಮಾಡಿರುವ ಪರಿಣಾಮವಾಗಿ, ಅಂಚೆ ಕಚೇರಿ ಅವಧಿ ಠೇವಣಿಗಳು ಮತ್ತೆ ಸ್ಪರ್ಧಾತ್ಮಕವಾಗಿ ಕಾಣುತ್ತಿವೆ. ಈ ಉಳಿತಾಯ ಯೋಜನೆಗಳು ಬಡ್ಡಿ ದರ ಏರಿಕೆಗೂ ಮೊದಲು ಬ್ಯಾಂಕ್‌ ಎಫ್‌.ಡಿ.ಗಳಿಗಿಂತ ಕಡಿಮೆ ಲಾಭ ತಂದುಕೊಡುತ್ತಿದ್ದವು.

ಅಂಚೆ ಕಚೇರಿಯ ಎರಡು ವರ್ಷಗಳ ಅವಧಿ ಠೇವಣಿಗೆ ಈಗ ಶೇ 6.9ರಷ್ಟು ಬಡ್ಡಿ ಸಿಗುತ್ತಿದೆ. ಇದೇ ಅವಧಿಯ ಬಹುತೇಕ ಬ್ಯಾಂಕ್‌ ಎಫ್‌.ಡಿ.ಗಳು ಈಗ ಇಷ್ಟೇ ಪ್ರಮಾಣದ ಬಡ್ಡಿ ನೀಡುತ್ತಿವೆ.

ಆರ್‌ಬಿಐ ರೆಪೊ ದರವನ್ನು 2022ರ ಮೇ ತಿಂಗಳಿನಿಂದ ಹೆಚ್ಚಿಸುತ್ತಿದೆ. ಬ್ಯಾಂಕ್‌ಗಳು ತಮ್ಮಲ್ಲಿನ ಠೇವಣಿಯನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಕಳೆದ ಆರ್ಥಿಕ ವರ್ಷದ ದ್ವಿತೀಯಾರ್ಧದಲ್ಲಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಹೆಚ್ಚಿಸುವ ಕೆಲಸಕ್ಕೆ ಚುರುಕು ನೀಡಿದವು.

ಕೇಂದ್ರ ಸರ್ಕಾರವು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವನ್ನು ಅಕ್ಟೋಬರ್–ಡಿಸೆಂಬರ್ ತ್ರೈಮಾಸಿಕದಲ್ಲಿ ಗರಿಷ್ಠ ಶೇ 0.30ರವರೆಗೆ, ಜನವರಿ–

ಮಾರ್ಚ್‌ ತ್ರೈಮಾಸಿಕದಲ್ಲಿ ಗರಿಷ್ಠ ಶೇ 1.10ರವರೆಗೆ ಹಾಗೂ ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌–ಜೂನ್‌ ತ್ರೈಮಾಸಿಕಕ್ಕೆ ಗರಿಷ್ಠ ಶೇ 0.70ರವರೆಗೆ ಹೆಚ್ಚಿಸಿದೆ. ಇದಕ್ಕೂ ಮೊದಲು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವು ಸತತ ಒಂಬತ್ತು ತ್ರೈಮಾಸಿಕಗಳಲ್ಲಿ ಯಾವ ಬದಲಾವಣೆಯನ್ನೂ ಕಂಡಿರಲಿಲ್ಲ.

ಆರ್‌ಬಿಐ ಅಂದಾಜಿನ ಅನ್ವಯ 1 ವರ್ಷದಿಂದ 2 ವರ್ಷಗಳವರೆಗಿನ, ಬ್ಯಾಂಕ್‌ ರಿಟೇಲ್‌ ಠೇವಣಿಗಳ ಮೇಲಿನ ಸರಾಸರಿ ಬಡ್ಡಿ ದರವು ಈಗ ಶೇ 6.9ರಷ್ಟು ಇದೆ. ಇದು 2022ರ ಸೆಪ್ಟೆಂಬರ್‌ನಲ್ಲಿ ಶೇ 5.8ರಷ್ಟು ಇತ್ತು.

ಮೂರು ವರ್ಷಗಳ ಅವಧಿಯ ಅಂಚೆ ಕಚೇರಿ ಅವಧಿ ಠೇವಣಿಯ ಬಡ್ಡಿದರವು ಶೇ 7ಕ್ಕೆ ತಲುಪಿದೆ. ಇದು ಈ ಮೊದಲು ಶೇ 5.5ರಷ್ಟು ಇತ್ತು. ದೇಶದ ಅತಿದೊಡ್ಡ ಬ್ಯಾಂಕ್‌ ಆಗಿರುವ ಎಸ್‌ಬಿಐ, ಎರಡು ವರ್ಷಕ್ಕಿಂತ ಹೆಚ್ಚಿನ ಹಾಗೂ ಮೂರು ವರ್ಷಕ್ಕಿಂತ ಕಡಿಮೆ ಅವಧಿಯ ಠೇವಣಿಗೆ ಶೇ 7ರಷ್ಟು ಬಡ್ಡಿ ನೀಡುತ್ತಿದೆ.

 

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

17 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

21 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

21 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

21 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

21 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

22 hours ago