BREAKING NEWS

IND vs AUS 4th T20: ಮಿಂಚಿದ ಜೈಸ್ವಾಲ್‌, ರುತುರಾಜ್‌, ರಿಂಕು, ಜಿತೇಶ್; ಆಸ್ಟ್ರೇಲಿಯಾಗೆ 175 ರನ್‌ಗಳ ಗುರಿ

ಸದ್ಯ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 3 ಪಂದ್ಯಗಳು ಮುಕ್ತಾಯವಾಗಿದ್ದು ಇಂದು ( ಡಿಸೆಂಬರ್‌ 1 ) ನಾಲ್ಕನೇ ಪಂದ್ಯ ಜರುಗುತ್ತಿದೆ. ಮೊದಲ ಹಾಗೂ ಎರಡನೇ ಪಂದ್ಯದಲ್ಲಿ ಭಾರತ ಜಯ ಸಾಧಿಸಿದ್ದರೆ, ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದು ಟೂರ್ನಿ ಗೆಲ್ಲುವ ಕನಸನ್ನು ಜೀವಂತವಾಗಿಸಿಕೊಂಡಿತ್ತು.

ಹೀಗಾಗಿ ಇಂದಿನ ಪಂದ್ಯದಲ್ಲಿ ಭಾರತ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದ್ದು, ಒಂದುವೇಳೆ ಆಸ್ಟ್ರೇಲಿಯಾ ಗೆದ್ದರೆ ಸರಣಿ ಸಮಬಲವಾಗಲಿದೆ. ಈ ಪಂದ್ಯ ರಾಯ್‌ಪುರದ ಶಹೀದ್‌ ವೀರ್‌ ನಾರಾಯಣ್‌ ಸಿಂಗ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್‌ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್‌ ಆಯ್ದುಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತ್ತು.

ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಟೀಮ್‌ ಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 174 ರನ್‌ ಗಳಿಸಿ ಆಸ್ಟ್ರೇಲಿಯಾಗೆ ಗೆಲ್ಲಲು 175 ರನ್‌ಗಳ ಗುರಿ ನೀಡಿದೆ.

ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್‌ ಹಾಗೂ ರುತುರಾಜ್‌ ಗಾಯಕ್ವಾಡ್‌ ಜೋಡಿ ಪವರ್‌ಪ್ಲೇನಲ್ಲಿ 50 ರನ್‌ಗಳ ಜತೆಯಾಟ ಆಡುವ ಮೂಲಕ ಉತ್ತಮ ಆರಂಭವನ್ನು ಕಟ್ಟಿಕೊಟ್ಟಿತು. ಯಶಸ್ವಿ ಜೈಸ್ವಾಲ್‌ 37 ರನ್‌ ಗಳಿಸಿದರೆ, ರುತುರಾಜ್‌ ಗಾಯಕ್ವಾಡ್‌ 32 ರನ್‌ ಕಲೆಹಾಕಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್‌ ಅಯ್ಯರ್‌ 8 ರನ್‌, ನಾಯಕ ಸೂರ್ಯಕುಮಾರ್‌ ಕೇವಲ 1 ರನ್‌ ಗಳಿಸಿ ನಿರಾಸೆ ಮೂಡಿಸಿದರು. ಬಳಿಕ ಅಬ್ಬರಿಸಿದ ಜಿತೇಶ್‌ ಶರ್ಮಾ 19 ಎಸೆತಗಳಲ್ಲಿ 3 ಸಿಕ್ಸರ್‌, 1 ಬೌಂಡರಿ ಸಹಿತ 35 ರನ್‌, ರಿಂಕು ಸಿಂಗ್‌ 29 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್‌ ಸಹಿತ 46 ರನ್‌ ಬಾರಿಸಿದರು. ಅಕ್ಷರ್ ಪಟೇಲ್‌ ಹಾಗೂ ದೀಪಕ್‌ ಚಹರ್‌ ಶೂನ್ಯ ಸುತ್ತಿದರೆ, ರವಿ ಬಿಷ್ಣೋಯಿ 4 ಹಾಗೂ ಅವೇಶ್‌ ಖಾನ್‌ ಅಜೇಯ 1 ರನ್‌ ಕಲೆಹಾಕಿದರು.

andolana

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

6 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

7 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

7 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

8 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

10 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

10 hours ago