ಇಂದು ( ನವೆಂಬರ್ 15 ) ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ತಂಡದ ವಿರುದ್ಧ 70 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆದುಕೊಂಡಿದೆ. ಅಲ್ಲದೇ 2019ರ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತಿದ್ದರ ಸೇಡನ್ನೂ ಸಹ ತೀರಿಸಿಕೊಂಡಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡು 50 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್ ಕಲೆಹಾಕಿ ಎದುರಾಳಿ ನ್ಯೂಜಿಲೆಂಡ್ ತಂಡಕ್ಕೆ ಗೆಲ್ಲಲು 398 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್ 48.5 ಓವರ್‌ಗಳಲ್ಲಿ 327 ರನ್‌ಗಳಿಗೆ ಆಲ್ ಔಟ್ ಆಗಿದೆ.
ಭಾರತದ ಇನ್ನಿಂಗ್ಸ್: ಭಾರತದ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಬ್‌ಮನ್ ಗಿಲ್ ಕಣಕ್ಕಿಳಿದರು. ಪವರ್‌ಪ್ಲೇನಲ್ಲಿ ಬೌಂಡರಿಗಳ ಮೇಲೆ ಬೌಂಡರಿ ಬಾರಿಸಿ ಅಬ್ಬರಿಸಿದ ರೋಹಿತ್ ಶರ್ಮಾ 29 ಎಸೆತಗಳಲ್ಲಿ 47 ರನ್ ಬಾರಿಸಿದರೆ, ಶುಬ್‌ಮನ್ ಗಿಲ್ ರಿಟೈರ್ಡ್ ಹರ್ಟ್ ಆದರೂ 66 ಎಸೆತಗಳಲ್ಲಿ ಅಜೇಯ 80 ರನ್ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ 113 ಎಸೆತಗಳಲ್ಲಿ 117 ರನ್ ಬಾರಿಸಿದರು. ಶ್ರೇಯಸ್ ಅಯ್ಯರ್ 70 ಎಸೆತಗಳಲ್ಲಿ 105 ರನ್ ಬಾರಿಸಿದರು. ಅಂತಿಮ ಹಂತದಲ್ಲಿ ಅಬ್ಬರಿಸಿದ ಕೆಎಲ್ ರಾಹುಲ್ 20 ಎಸೆತಗಳಲ್ಲಿ ಅಜೇಯ 39 ರನ್ ಬಾರಿಸಿದರೆ, ಸೂರ್ಯಕುಮಾರ್ ಯಾದವ್ 1 ರನ್ ಕಲೆಹಾಕಿದರು.
ಭಾರತದ ದಾಂಡಿಗರನ್ನು ಕಟ್ಟಿಹಾಕುವಲ್ಲಿ ವಿಫಲರಾದ ನ್ಯೂಜಿಲೆಂಡ್ ತಂಡದ ಪರ ಟಿಮ್ ಸೌಥಿ 3 ವಿಕೆಟ್ ಪಡೆದರೆ, ಟ್ರೆಂಟ್ ಬೌಲ್ಟ್ ಒಂದು ವಿಕೆಟ್ ಪಡೆದರು. ಇನ್ನುಳಿದ ಯಾವುದೇ ಬೌಲರ್ ಸಹ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಲಿಲ್ಲ.
ನ್ಯೂಜಿಲೆಂಡ್ ಇನ್ನಿಂಗ್ಸ್: ನ್ಯೂಜಿಲೆಂಡ್ ಪರ ಡಿವೊನ್ ಕಾನ್ವೆ 13, ರಚಿನ್ ರವೀಂದ್ರ 13, ಕೇನ್ ವಿಲಿಯಮ್ಸನ್ 69, ಡೇರಿಲ್ ಮಿಚೆಲ್ 134, ಟಾಮ್ ಲಥಮ್ ಡಕ್ ಔಟ್, ಗ್ಲೆನ್ ಫಿಲಿಪ್ಸ್ 41, ಮಾರ್ಕ್ ಚಾಂಪ್‌ಮನ್ 2, ಮಿಚೆಲ್ ಸ್ಯಾಂಟ್‌ನರ್ 9, ಟಿಮ್ ಸೌಥಿ 9, ಲಾಕಿ ಫರ್ಗುಸನ್ 6 ಹಾಗೂ ಟ್ರೆಂಟ್ ಬೌಲ್ಟ್ ಅಜೇಯ 2 ರನ್ ಗಳಿಸಿದರು.
ಟೀಮ್ ಇಂಡಿಯಾ ಪರ ಮೊಹಮ್ಮದ್ ಶಮಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದರು. ಬರೋಬ್ಬರಿ 7 ವಿಕೆಟ್ ಕಬಳಿಸಿದ ಮೊಹಮ್ಮದ್ ಶಮಿ ನ್ಯೂಜಿಲೆಂಡ್ ಗೆಲುವಿನ ಕನಸಿಗೆ ತಣ್ಣೀರನ್ನು ಎರಚಿದರು. ಇನ್ನುಳಿದಂತೆ ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಕುಲ್‌ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಕಬಳಿಸಿದರು. ಅದ್ಭುತ ಪ್ರದರ್ಶನ ನೀಡಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ಮೊಹಮ್ಮದ್ ಶಮಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…