ಮಂಡ್ಯ: ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ಕುಂದನಿ ಬೆಟ್ಟದ ಮೇಲೆ ೧೫ ಕಟ್ಟೆ ಕಟ್ಟಿ ಪ್ರಸಿದ್ಧಿ ಪಡೆದಿದ್ದ ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ (೮೩) ಸೋಮವಾರ ನಸುಕಿನಲ್ಲಿ ನಿಧನರಾದರು.
ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ, ಅವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ೨ ಗಂಟೆಗೆ ನೆರವೇರಿತು. ಕಾಮೇಗೌಡರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.
ಕುರಿಗಾಹಿಯಾಗಿದ್ದ ಅವರು ಕುರಿ ಮಾರಿ ಸಂಪಾದಿಸಿದ ಹಣದಲ್ಲಿ ಬೆಟ್ಟದ ಮೇಲೆ ಕೆರೆ ಕಟ್ಟೆಗಳನ್ನು ತೋಡಿಸಿದ್ದರು. ಪ್ರತಿ ಕಟ್ಟೆಗೂ ದೇವರು ಹಾಗೂ ಮೊಮ್ಮಕ್ಕಳ ಹೆಸರು ಇಟ್ಟಿದ್ದರು. ಹಲವು ವರ್ಷಗಳಿಂದಲೂ ಕಟ್ಟೆಗಳನ್ನು ಸಂರಕ್ಷಿಸಿ ಬೆಟ್ಟದ ತಟದಲ್ಲಿ ಹಸಿರು ಪರಿಸರ ಇರುವಂತೆ ನೋಡಿಕೊಂಡಿದ್ದರು. ಬೆಟ್ಟದ ಮೇಲ್ಭಾಗ ಹಾಗೂ ತಟದಲ್ಲಿ ನೂರಾರು ಸಸಿ ನೆಟ್ಟು ಬೆಳೆಸಿದ್ದರು.
ಕಾಮೇಗೌಡರ ಪ್ರಕೃತಿ ಸಂರಕ್ಷಣೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆದಿತ್ತು, ೨೦೨೦ರಲ್ಲಿ ‘ಮನ್ ಕಿ ಬಾತ್’ ಸರಣಿಯಲ್ಲಿ ಕಾಮೇಗೌಡರ ಸೇವೆಯನ್ನು ಕೊಂಡಾಡಿದ್ದರು. ರಾಷ್ಟ್ರಮಟ್ಟದಲ್ಲಿ ಹಲವು ನಾಯಕರು ಅವರ ಸೇವೆಯನ್ನು ಹೊಗಳಿದ್ದರು. ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಕೂಡ ಅವರ ಸೇವೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದರು. ಅವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ರಮಾಗೋವಿಂದ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಜಲ ಸಂರಕ್ಷಣೆ ಕಾರ್ಯದಲ್ಲಿ ತೊಡಗಿಕೊಂಡು ಸುಮಾರು ೧೫ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎಂದೇ ಖ್ಯಾತಿ ಗಳಿಸಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ಜಲಋಷಿ ಕಾಮೇಗೌಡರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ.
-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
ಅಂತರ್ಜಲ ವೃದ್ಧಿಯಲ್ಲಿ ದೇಶದ ಗಮನ ಸೆಳೆದಿದ್ದ, ೧೬ ಕೆರೆಗಳ ನಿರ್ಮಾತೃ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲ್ಮನೆ ಕಾಮೇಗೌಡ ಅವರ ನಿಧನದಿಂದ ಅತೀವ ನೋವಾಗಿದೆ. ಜಲ ಸಂರಕ್ಷಣೆ ಬಗ್ಗೆ ಅವರು ಹಾಕಿಕೊಟ್ಟ ಮೇಲ್ಪಂಕ್ತಿ ಅನುಕರಣೀಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ
ಪರಿಸರ ಜೀವಿ, ಕೆರೆಗಳ ನಿರ್ಮಾಣದ ಮೂಲಕ ನೀರಿನ ಮಹತ್ವ ಸಾರಿದ ಕಲ್ಮನೆ ಕಾಮೇಗೌಡ ಇನ್ನಿಲ್ಲ ಎನ್ನುವ ಸುದ್ದಿ ಕೇಳಿ ಬಹಳ ನೋವಾಯಿತು. ಕುರಿ ಸಾಕಣೆ ಕಾಯಕದಲ್ಲಿ ತೊಡಗಿದ್ದ ಅವರು ತಮ್ಮ ದುಡಿಮೆ ಹಣದಲ್ಲಿಯೇ ೧೪ಕ್ಕೂ ಹೆಚ್ಚು ಕೆರೆ-ಕಟ್ಟೆ ನಿರ್ಮಾಣ ಮಾಡಿ ಸಕ್ಕರೆ ನಾಡಿನ ಆಧುನಿಕ ಭಗೀರಥರಾಗಿದ್ದರು.
-ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ
ನವದೆಹಲಿ: ಕೇಂದ್ರ ಸರ್ಕಾರದ ನೀತಿಯೂ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ…
ಮೈಸೂರು: ಜೆಡಿಎಸ್‌ನ 9 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲು ಈಗಾಗಲೇ ತಯಾರಿ ನಡೆಸಿದ್ದು, ಫೆಬ್ರವರಿ ವೇಳೆಗೆ ಅವರೆಲ್ಲಾ ಕಾಂಗ್ರೆಸ್ ಸೇರಲಿದ್ದಾರೆ…
ನವದೆಹಲಿ: ಕೇಂದ್ರ ಕಾರ್ಮಿಕ ಸಚಿವಾಲಯವು ಇತ್ತೀಚಿಗೆ ಏಕೀಕೃತ ಪಿಂಚಣಿ ಪಾವತಿ ವ್ಯವಸ್ಥೆಯನ್ನು(CPPO) ಜಾರಿ ಮಾಡಿದೆ. ಈ ವ್ಯವಸ್ಥೆಯ ಮೂಲಕ ಪಿಂಚಣಿದಾರರು…
ಮುಂಬೈ: ಪೋಖ್ರಾನ್-1 ಹಾಗೂ ಪೋಖ್ರಾನ್-2 ಪರಮಾಣು ಪರೀಕ್ಷೆಯ ಪ್ರಮುಖ ರೂವಾರಿ ಪರಮಾಣು ವಿಜ್ಞಾನಿ ಹಾಗೂ ಕ್ರಿಸ್ಟಲೋಗ್ರಫರ್ ಡಾ. ರಾಜಗೋಪಾಲ ಚಿದಂಬರಂ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿ, ಜಾಮೀನಿನ ಮೇಲೆ ಹೊರ ಬಂದಿರುವ ನಟ ದರ್ಶನ್ ಬೆನ್ನುನೋವಿಗೆ…
ಮೈಸೂರು: ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿಕಾರಿದ್ದಾರೆ. ಈ ಕುರಿತು…