ಕೋವಿಡ್‌ ಭೀತಿ: ಭಾರತ-ಇಂಗ್ಲೆಂಡ್‌ ನಡುವಿನ ಅಂತಿಮ ಟೆಸ್ಟ್‌ ಪಂದ್ಯ ರದ್ದು

ಮ್ಯಾಂಚೆಸ್ಟರ್‌: ಕೋವಿಡ್‌ ಭೀತಿಯಿಂದಾಗಿ ಭಾರತ-ಇಂಗ್ಲೆಂಡ್‌ ನಡುವೆ ಶುಕ್ರವಾರ ನಡೆಯಬೇಕಿದ್ದ ಅಂತಿಮ ಟೆಸ್ಟ್‌ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಈ ಕುರಿತು ಶುಕ್ರವಾರ ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಓಲ್ಡ್‌ ಟ್ರಾಫರ್ಡ್‌ ಕ್ರೀಡಾಂಗಣದಲ್ಲಿ ಇಂದು ಅಂತಿಮ ಟೆಸ್ಟ್‌ ಪಂದ್ಯ ನಡೆಯಬೇಕಿತ್ತು. ಕೋವಿಡ್‌ ಭೀತಿಯಿಂದಾಗಿ ಪಂದ್ಯ ರದ್ದುಗೊಳಿಸಲಾಗಿದೆ. ಬಿಸಿಸಿಐ ಜೊತೆಗೆ ಸುದೀರ್ಘ ಸಮಾಲೋಚನೆ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.

ಭಾರತ ತಂಡದ ಸಹಾಯಕ ಸಿಬ್ಬಂದಿಗೆ ಗುರುವಾರ ಕೋವಿಡ್‌ ತಗುಲಿತ್ತು. ನಂತರ ಭಾರತ ಕ್ರಿಕೆಟ್‌ ತಂಡದ ಎಲ್ಲಾ ಆಟಗಾರರಿಗೆ ಆರ್‌ಟಿ-ಪಿಸಿಆರ್‌ ಪರೀಕ್ಷೆ ನಡೆಸಿದ್ದು, ಎಲ್ಲರ ವರದಿಯೂ ನೆಗೆಟಿವ್‌ ಬಂದಿದೆ.

× Chat with us