ವಿಶ್ವದಲ್ಲೇ ಅತಿ ದೊಡ್ಡ ರಸ್ತೆ ಜಾಲವನ್ನು ಹೊಂದಿರುವ ಎರಡನೇ ದೇಶ ಭಾರತವಾಗಿ ಹೊರಹೊಮ್ಮಿದೆ. ಎರಡನೇ ಸ್ಥಾನದಲ್ಲಿರುವ ಚೀನಾ ಮೂರನೇ ಸ್ಥಾನಕ್ಕೆ ಸರಿದಿದೆ.
ಯಾವುದೇ ದೇಶಕ್ಕೆ ಮೂಲಸೌಕರ್ಯ ಬಹಳ ಮುಖ್ಯ. ಅದರಲ್ಲಿಯೂ ರಸ್ತೆ ಸಾರಿಗೆ ಸೌಲಭ್ಯ ಅತ್ಯಗತ್ಯ. ಈ ವಿಷಯದ ಮೇಲೆ ಕೇಂದ್ರೀಕರಿಸಿದ ಕೇಂದ್ರ ಸರ್ಕಾರವು ದೇಶಾದ್ಯಂತ ರಸ್ತೆ ಸಂಪರ್ಕವನ್ನು ಹೆಚ್ಚಿಸುತ್ತಿದೆ. ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಭಾರತವು ಕಳೆದ ಒಂಭತ್ತು ವರ್ಷಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಮತ್ತು ವಿಶ್ವದ ಅತಿದೊಡ್ಡ ರಸ್ತೆ ಜಾಲವನ್ನು ಹೊಂದಿರುವ ಎರಡನೇ ದೇಶವಾಗಿ ಹೊರಹೊಮ್ಮಿದೆ.
ಎರಡನೇ ಸ್ಥಾನದಲ್ಲಿದ್ದ ಚೀನಾ ಒಂದು ಹೆಜ್ಜೆ ಹಿಂದಕ್ಕಿಟ್ಟಿದ್ದು, ಇದೀಗ ಎರಡನೇ ಸ್ಥಾನಕ್ಕೆ ಭಾರತ ಜಿಗಿದಿದೆ. ಈ ಬಗ್ಗೆ ಮಾತನಾಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ತಮ್ಮ ಸರ್ಕಾರದ ಆಡಳಿತದಲ್ಲಿ ಮಾತ್ರ ಈ ಸಾಧನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಆಡಳಿತ ಒಂಬತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಒಂಬತ್ತು ವರ್ಷಗಳಲ್ಲಿ ದೇಶದಲ್ಲಿ ರಸ್ತೆ ಜಾಲ ಗಣನೀಯವಾಗಿ ಹೆಚ್ಚಿದೆ. ಈ ಒಂಬತ್ತು ವರ್ಷಗಳಲ್ಲಿ ಭಾರತದ ರಸ್ತೆ ಜಾಲವು ಶೇಕಡಾ 59 ರಷ್ಟು ಬೆಳೆದಿದೆ ಎಂದು ಹೇಳಿದರು.
ನರೇಂದ್ರ ಮೋದಿಯವರ ಆಡಳಿತದಲ್ಲಿ ದೇಶಾದ್ಯಂತ ಒಂದು ಲಕ್ಷ ಕಿಲೋಮೀಟರ್ ರಸ್ತೆಗಳನ್ನು ಹಾಕಲಾಗಿದೆ ಎಂದ ಗಡ್ಕರಿ, ಭಾರತೀಯ ರಸ್ತೆ ಜಾಲವು ಸುಮಾರು 64 ಲಕ್ಷ ಕಿಲೋಮೀಟರ್ ತಲುಪಿದೆ. ಆ ಮೂಲಕ ಎರಡನೇ ಸ್ಥಾನದಲ್ಲಿರುವ ಚೀನಾವನ್ನು (63 ಲಕ್ಷ ಕಿಲೋಮೀಟರ್) ಕೆಳಕ್ಕೆ ತಳ್ಳಲಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಅಮೆರಿಕ (68 ಲಕ್ಷ ಕಿಲೋಮೀಟರ್) ಮೊದಲ ಸ್ಥಾನದಲ್ಲಿದೆ.
ಕೇಂದ್ರ ಸಚಿವ ಗಡ್ಕರಿ ಅವರು ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣಕ್ಕೆ ಮೋದಿ ಸರ್ಕಾರ ವಿಶೇಷ ಗಮನ ಹರಿಸಿರುವುದನ್ನು ಬಹಿರಂಗಪಡಿಸಿದರು. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ 2013-14ರ ವೇಳೆಗೆ ದೇಶದಲ್ಲಿ 91,287 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿಗಳಿದ್ದು, ನರೇಂದ್ರ ಮೋದಿ ಪ್ರಧಾನಿಯಾದ ಒಂಬತ್ತು ವರ್ಷಗಳಲ್ಲಿ ಈ ಸಂಖ್ಯೆ 1.45 ಲಕ್ಷ ಕಿಲೋಮೀಟರ್ ತಲುಪಿದೆ ಎಂದರು.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) 30 ಸಾವಿರ ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್‌ಪ್ರೆಸ್‌ವೇಗಳನ್ನು ನಿರ್ಮಿಸಿದೆ. ಕೆಲವು ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳನ್ನು ವಿಸ್ತರಿಸಲಾಗಿದೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ನಿರ್ಮಾಣವು ತ್ವರಿತ ಗತಿಯಲ್ಲಿ ನಡೆಯುತ್ತಿದೆ ಎಂದು ಗಡ್ಕರಿ ಹೇಳಿದರು.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) 30 ಸಾವಿರ ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್‌ಪ್ರೆಸ್‌ವೇಗಳನ್ನು ನಿರ್ಮಿಸಿದೆ. ಕೆಲವು ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳನ್ನು ವಿಸ್ತರಿಸಲಾಗಿದೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ನಿರ್ಮಾಣವು ತ್ವರಿತ ಗತಿಯಲ್ಲಿ ನಡೆಯುತ್ತಿದೆ ಎಂದು ಗಡ್ಕರಿ ಹೇಳಿದರು.
ಇದರ ಪ್ರಕಾರ ಕೇಂದ್ರ ಸಂಕಲ್ಪದಿಂದ ಕೆಲಸ ಮಾಡುತ್ತಿದೆ. ಫಾಸ್ಟ್‌ಟ್ಯಾಗ್ ಅಳವಡಿಕೆಯಿಂದ ಹೆದ್ದಾರಿಗಳಲ್ಲಿ ವಾಹನ ಸವಾರರಿಗೆ ಸಾಕಷ್ಟು ಸಮಯ ಉಳಿತಾಯವಾಗುತ್ತಿದೆ ಎಂದು ಗಡ್ಕರಿ ಹೇಳಿದರು.