ನವದೆಹಲಿ : ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಭಾರತ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ರಾಷ್ಟ್ರವಾಗಿದೆ. ಆ ಮೂಲಕ ಜನಸಂಖ್ಯೆಯಲ್ಲಿ ನೆರೆಯ ದೇಶ ಚೀನಾವನ್ನೇ ಹಿಂದಿಕ್ಕಿದೆ.
ಭಾರತ 142.86 ಕೋಟಿ ಜನಸಂಖ್ಯೆ ಹೊಂದಿದ್ದರೆ, ಚೀನಾ 142.57 ಕೋಟಿ ಜನಸಂಖ್ಯೆ ಹೊಂದಿದೆ.
ಭಾರತದ ಜನಸಂಖ್ಯೆಯ ಸುಮಾರು 1/4 ರಷ್ಟು ಜನರು 14 ವರ್ಷದ ಒಳಗಿನವರಾಗಿದ್ದಾರೆ. ಜನಸಂಖ್ಯೆಯ ಶೇಕಡಾ 68ರಷ್ಟು ಜನರು 15 ರಿಂದ 64 ವಯಸ್ಸಿನವರಾಗಿದ್ದರೆ, ಶೇಕಡಾ 7ರಷ್ಟು ಜನರು 65 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ ಎಂದು ವಿಶ್ವಸಂಸ್ಥೆ ವರದಿ ಮಾಡಿದೆ. ಚೀನಾದಲ್ಲಿ ವಯಸ್ಕರ ಪ್ರಮಾಣ ಹೆಚ್ಚಿದ್ದರೆ, ಭಾರತ ಯುವ ಶಕ್ತಿಯಿಂದ ಕೂಡಿದೆ ಎಂದು ತಿಳಿಸಿದೆ.
ಇತ್ತೀಚಿನ ವರ್ಷಗಳಲ್ಲಿ ಚೀನಾದಲ್ಲಿ ಮಕ್ಕಳ ಜನನ ಪ್ರಮಾಣದಲ್ಲಿ ತೀವ್ರ ಕುಸಿತ ಕಂಡಿದೆ. ವಯಸ್ಕರ ಪ್ರಮಾಣದಲ್ಲಿ ಏರಿಕೆಯಾಗಿದೆ. ಜನನ ಪ್ರಮಾಣವನ್ನು ಹೆಚ್ಚಿಸಲು ಚೀನಾ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿತ್ತು. ಆದರೆ, ಈ ಯಾವ ಯೋಜನೆಗಳೂ ಉದ್ದೇಶಿತ ಫಲಿತಾಂಶವನ್ನು ನೀಡಿರಲಿಲ್ಲ.
1950ರಿಂದಲೂ ವಿಶ್ವಸಂಸ್ಥೆ ಎಲ್ಲ ದೇಶಗಳ ಜನಸಂಖ್ಯೆಯ ಪ್ರಮಾಣವನ್ನು ಬಿಡುಗಡೆ ಮಾಡುತ್ತಿದ್ದು, ಇದೇ ಮೊದಲ ಬಾರಿಗೆ ಭಾರತ ಎಲ್ಲ ದೇಶಗಳನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದೆ. ಪ್ರತಿ ಹತ್ತು ವರ್ಷಕ್ಕೊಮ್ಮೆ ಭಾರತ ಸರ್ಕಾರ ಜನಗಣತಿ ನಡೆಸುತ್ತಾ ಬಂದಿದೆ. 2011ರಲ್ಲಿ ಜನಗಣತಿ ನಡೆಸಿದ್ದು, ಕೊರೊನಾ ಕಾರಣಕ್ಕೆ 2021ರಲ್ಲಿ ನಡೆಯಬೇಕಿದ್ದ ಜನಗಣತಿ ಪ್ರಕ್ರಿಯೆ ನಿಂತು ಹೋಗಿತ್ತು. ಈ ಕಾರಣಕ್ಕೆ ಭಾರತದಲ್ಲಿ ಎಷ್ಟು ಜನಸಂಖ್ಯೆ ಪ್ರಮಾಣ ಹೆಚ್ಚಿದೆ ಎಂಬ ಮಾಹಿತಿ ತಿಳಿದಿರಲಿಲ್ಲ.
ಸಂಸ್ಥೆಯೊಂದು ನಡೆಸಿದ ಅಧ್ಯಯನದ ಪ್ರಕಾರ ಇನ್ನೂ ಮೂರು ದಶಕಗಳ ಕಾಲ ಭಾರತದ ಜನಸಂಖ್ಯೆ ಏರಿಕೆಯಾಗಲಿದೆ. ಭಾರತದ ಜನಸಂಖ್ಯೆ 165 ಕೋಟಿ ತಲುಪಿದ ನಂತರ ಜನಸಂಖ್ಯೆಯಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…