BREAKING NEWS

ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 125 ದೇಶಗಳ ಪೈಕಿ ಭಾರತಕ್ಕೆ 111ನೇ ಸ್ಥಾನ

ನವದೆಹಲಿ : ಗುರುವಾರ ಬಿಡುಗಡೆಯಾದ ಜಾಗತಿಕ ಹಸಿವಿನ ಸೂಚ್ಯಂಕ 2023 ರಲ್ಲಿ ಭಾರತ ಜಗತ್ತಿನ 125 ದೇಶಗಳ ಪೈಕಿ 111ನೇ ಸ್ಥಾನ ಪಡೆದಿದೆ. ಆದರೆ ಈ ರ್ಯಾಂಕಿಂಗ್‌ ಬಗ್ಗೆ ಆಕ್ಷೇಪಿಸಿರುವ ಭಾರತ ಸರ್ಕಾರ ಅದು ದೋಷದಿಂದ ಕೂಡಿದೆ ಮತ್ತು ದುರುದ್ದೇಶ ಹೊಂದಿದೆ ಎಂದು ಹೇಳಿದೆ.

ಗುರುವಾರ ಬಿಡುಗಡೆಗೊಂಡ ಸೂಚ್ಯಂಕದಲ್ಲಿ ಭಾರತಕ್ಕೆ 28.7 ಅಂಕಗಳು ದೊರಕಿದ್ದು ದೇಶದಲ್ಲಿ ಹಸಿವಿನ ಪ್ರಮಾಣದ ಗಂಭೀರತೆಯನ್ನು ಇದು ಸೂಚಿಸಿದೆ. ಈ ಸೂಚ್ಯಂಕದಲ್ಲಿ ನೆರೆಯ ದೇಶಗಳಾದ ಪಾಕಿಸ್ತಾನ 102ನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ 81ನೇ ಸ್ಥಾನದಲ್ಲಿ, ನೇಪಾಳ 69ನೇ ಸ್ಥಾನದಲ್ಲಿ ಮತ್ತು ಶ್ರೀಲಂಕಾ 60ನೇ ಸ್ಥಾನದಲ್ಲಿವೆ.

ಭಾರತದಲ್ಲಿ ಅಪೌಷ್ಠಿಕಾಂಶದ ಕೊರತೆಯು ಶೇ 16.6 ರಷ್ಟಿದ್ದರೆ ಐದು ವರ್ಷದ ಕೆಳಗಿನ ಮಕ್ಕಳ ಮರಣ ಪ್ರಮಾಣ ಶೇ 3.1 ಇದೆ. ಹದಿನೈದು ಮತ್ತು 24 ವರ್ಷ ಪ್ರಾಯದ ಮಹಿಳೆಯರಲ್ಲಿ ರಕ್ತಹೀನತೆಯ ಪ್ರಮಾಣ ಶೇ 58.1ರಷ್ಟಿದೆ ಎಂದು ವರದಿ ಹೇಳಿದೆ.

ಈ ಜಾಗತಿಕ ಹಸಿವಿನ ಸೂಚ್ಯಂಕವನ್ನು ತಿರಸ್ಕರಿಸಿರುವ ಭಾರತ ಸರ್ಕಾರ, ಹಸಿವನ್ನು ಮಾಪನ ಮಾಡುವ ಕ್ರಮ ದೋಷಪೂರಿತವಾಗಿದೆ ಹಾಗೂ ಭಾರತದ ವಾಸ್ತವ ಚಿತ್ರಣವನ್ನು ಬಿಂಬಿಸುವುದಿಲ್ಲ ಎಂದು ಹೇಳಿದೆ.

ಈ ಸೂಚ್ಯಂಕ ಸಿದ್ಧಪಡಿಸಿದ ರೀತಿಯಲ್ಲಿ ಹಲವು ದೋಷಗಳಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಹೇಳಿದೆ.

2022 ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 121 ದೇಶಗಳ ಪಟ್ಟಿಯಲ್ಲಿ ಭಾರತ 107ನೇ ಸ್ಥಾನ ಪಡೆದಿತ್ತು.

andolanait

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

14 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

15 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

16 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

17 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

20 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

20 hours ago