BREAKING NEWS

ಯುದ್ಧಪೀಡಿತ ಗಾಝಾಗೆ ನೆರವು ಸಾಮಾಗ್ರಿಗಳನ್ನು ರವಾನಿಸಿದ ಭಾರತ

ನವದೆಹಲಿ : ಸಂಘರ್ಷ ಪೀಡಿತ ಹಾಗೂ ಇಸ್ರೇಲ್‌ನಿಂದ ದಿಗ್ಬಂಧನಕ್ಕೊಳಗಾಗಿರುವ ಗಾಝಾಗೆ ಭಾನುವಾರ ಭಾರತವು ವೈದ್ಯಕೀಯ ನೆರವು ಹಾಗೂ ಪರಿಹಾರ ಸಾಮಾಗ್ರಿಗಳನ್ನು ರವಾನಿಸಿತು ಎಂದು ndtv.com ವರದಿ ಮಾಡಿದೆ.

“ಈ ಪರಿಹಾರ ಸಾಮಾಗ್ರಿಗಳಲ್ಲಿ ಅತ್ಯಗತ್ಯ ಜೀವರಕ್ಷಕ ಔಷಧಗಳು, ಶಸ್ತ್ರಚಿಕಿತ್ಸಾ ಸಾಮಗ್ರಿಗಳು, ಟೆಂಟ್, ಟಾರ್ಪಾಲಿನ್‍ ಗಳು ಹಾಗೂ ಇನ್ನಿತರ ಅಗತ್ಯ ಸಾಮಗ್ರಿಗಳನ್ನು ರವಾನಿಸಲಾಗಿದೆ” ಎಂದು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

ಆಕ್ಟೋಬರ್ 7ರಂದು ಹಮಾಸ್ ಹೋರಾಟಗಾರರು ತನ್ನ ನೆಲದ ಮೇಲೆ ಹಠಾತ್ ದಾಳಿ ನಡೆಸಿದ ಬಳಿಕ ಗಾಝಾದ ಮೇಲೆ ಸಂಪೂರ್ಣ ದಿಗ್ಬಂಧನ ವಿಧಿಸಿರುವ ಇಸ್ರೇಲ್ ಅಲ್ಲಿಗೆ ನೀರು, ವಿದ್ಯುತ್, ಇಂಧನ ಹಾಗೂ ಆಹಾರ ಪೂರೈಕೆಯನ್ನು ಕಡಿತಗೊಳಿಸಿದೆ ಹಾಗೂ ಅವಶ್ಯಕ ವಸ್ತುಗಳ ತೀವ್ರ ಅಭಾವವನ್ನು ಸಷ್ಟಿಸಿದೆ.

https://x.com/MEAIndia/status/1715958107849842722?s=20

andolanait

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

7 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

7 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

7 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

7 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

10 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

10 hours ago