ಸದ್ಯ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 3 ಪಂದ್ಯಗಳು ಮುಕ್ತಾಯವಾಗಿದ್ದು ಇಂದು ( ಡಿಸೆಂಬರ್ 1 ) ನಾಲ್ಕನೇ ಪಂದ್ಯ ಜರುಗುತ್ತಿದೆ. ಮೊದಲ ಹಾಗೂ ಎರಡನೇ ಪಂದ್ಯದಲ್ಲಿ ಭಾರತ ಜಯ ಸಾಧಿಸಿದ್ದರೆ, ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದು ಟೂರ್ನಿ ಗೆಲ್ಲುವ ಕನಸನ್ನು ಜೀವಂತವಾಗಿಸಿಕೊಂಡಿತ್ತು.
ಹೀಗಾಗಿ ಇಂದಿನ ಪಂದ್ಯದಲ್ಲಿ ಭಾರತ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದ್ದು, ಒಂದುವೇಳೆ ಆಸ್ಟ್ರೇಲಿಯಾ ಗೆದ್ದರೆ ಸರಣಿ ಸಮಬಲವಾಗಲಿದೆ. ಈ ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ದುಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಭಾರತ ಆಡುವ ಬಳಗ: ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್(ನಾಯಕ), ಜಿತೇಶ್ ಶರ್ಮಾ(ವಿಕೆಟ್ ಕೀಪರ್), ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ದೀಪಕ್ ಚಾಹರ್, ಅವೇಶ್ ಖಾನ್, ಮುಖೇಶ್ ಕುಮಾರ್
ಆಸ್ಟ್ರೇಲಿಯಾ ಆಡುವ ಬಳಗ: ಜೋಶ್ ಫಿಲಿಪ್, ಟ್ರಾವಿಸ್ ಹೆಡ್, ಬೆನ್ ಮೆಕ್‌ಡರ್ಮಾಟ್, ಆರನ್ ಹಾರ್ಡಿ, ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ವೇಡ್(ನಾಯಕ ಹಾಗೂ ವಿಕೆಟ್ ಕೀಪರ್), ಬೆನ್ ದ್ವಾರ್ಶುಯಿಸ್, ಕ್ರಿಸ್ ಗ್ರೀನ್, ಜೇಸನ್ ಬೆಹ್ರೆನ್‌ಡಾರ್ಫ್, ತನ್ವೀರ್ ಸಂಘ





