BREAKING NEWS

IND vs AUS 4th T20: ಪಂದ್ಯದ ಟಾಸ್‌ ವರದಿ ಹಾಗೂ ಆಡುವ ಬಳಗದ ಮಾಹಿತಿ

ಸದ್ಯ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 3 ಪಂದ್ಯಗಳು ಮುಕ್ತಾಯವಾಗಿದ್ದು ಇಂದು ( ಡಿಸೆಂಬರ್‌ 1 ) ನಾಲ್ಕನೇ ಪಂದ್ಯ ಜರುಗುತ್ತಿದೆ. ಮೊದಲ ಹಾಗೂ ಎರಡನೇ ಪಂದ್ಯದಲ್ಲಿ ಭಾರತ ಜಯ ಸಾಧಿಸಿದ್ದರೆ, ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದು ಟೂರ್ನಿ ಗೆಲ್ಲುವ ಕನಸನ್ನು ಜೀವಂತವಾಗಿಸಿಕೊಂಡಿತ್ತು.

ಹೀಗಾಗಿ ಇಂದಿನ ಪಂದ್ಯದಲ್ಲಿ ಭಾರತ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದ್ದು, ಒಂದುವೇಳೆ ಆಸ್ಟ್ರೇಲಿಯಾ ಗೆದ್ದರೆ ಸರಣಿ ಸಮಬಲವಾಗಲಿದೆ. ಈ ಪಂದ್ಯ ರಾಯ್‌ಪುರದ ಶಹೀದ್‌ ವೀರ್‌ ನಾರಾಯಣ್‌ ಸಿಂಗ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್‌ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್‌ ಆಯ್ದುಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿದೆ.

ಭಾರತ ಆಡುವ ಬಳಗ: ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್(ನಾಯಕ), ಜಿತೇಶ್ ಶರ್ಮಾ(ವಿಕೆಟ್‌ ಕೀಪರ್), ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ದೀಪಕ್ ಚಾಹರ್, ಅವೇಶ್ ಖಾನ್, ಮುಖೇಶ್ ಕುಮಾರ್

ಆಸ್ಟ್ರೇಲಿಯಾ ಆಡುವ ಬಳಗ: ಜೋಶ್ ಫಿಲಿಪ್, ಟ್ರಾವಿಸ್ ಹೆಡ್, ಬೆನ್ ಮೆಕ್‌ಡರ್ಮಾಟ್, ಆರನ್ ಹಾರ್ಡಿ, ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ವೇಡ್(ನಾಯಕ ಹಾಗೂ ವಿಕೆಟ್‌ ಕೀಪರ್), ಬೆನ್ ದ್ವಾರ್ಶುಯಿಸ್, ಕ್ರಿಸ್ ಗ್ರೀನ್, ಜೇಸನ್ ಬೆಹ್ರೆನ್‌ಡಾರ್ಫ್, ತನ್ವೀರ್ ಸಂಘ

andolana

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

10 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

12 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago