ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ ಸರಣಿಯಲ್ಲಿ ಸಮಬಲ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಗೆದ್ದು ಮುನ್ನಡೆ ಸಾಧಿಸಿದ್ದ ಭಾರತ ಇಂದು ( ಡಿಸೆಂಬರ್ 19 ) ಜಿಕೆಬರ್ಹಾದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಸೋಲನ್ನು ಕಂಡಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಬ್ಯಾಟಿಂಗ್ ಮಾಡಿದ ಭಾರತ 46.2 ಓವರ್‌ಗಳಲ್ಲಿ 211 ರನ್ ಕಲೆಹಾಕಿ ಆಲ್‌ಔಟ್ ಆಗಿ ಎದುರಾಳಿ ದಕ್ಷಿಣ ಆಫ್ರಿಕಾಗೆ ಗೆಲ್ಲಲು 212 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ದಕ್ಷಿಣ ಆಫ್ರಿಕಾ 42.3 ಓವರ್‌ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಹರಿಣಗಳು 3 ಪಂದ್ಯಗಳ ಏಕದಿನ ಸರಣಿಯಲ್ಲಿ 1 – 1 ಅಂತರದಿಂದ ಸಮಬಲ ಸಾಧಿಸಿದೆ.
ಭಾರತದ ಇನ್ನಿಂಗ್ಸ್: ಟೀಮ್ ಇಂಡಿಯಾ ಪರ ನಾಯಕ ಕೆಎಲ್ ರಾಹುಲ್ ಹಾಗೂ ಸಾಯಿ ಸುದರ್ಶನ್ ಅರ್ಧಶತಕ ಬಾರಿಸುವ ಮೂಲಕ ಜವಾಬ್ದಾರಿಯುತ ಆಟವನ್ನಾಡಿದ್ದಾರೆ. ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಶನ್ 62 ರನ್ ಗಳಿಸಿದರೆ, ನಾಯಕ ರಾಹುಲ್ 56 ರನ್ ಬಾರಿಸಿದರು.
ಇನ್ನುಳಿದಂತೆ ಭಾರತದ ಯಾವ ಆಟಗಾರನೂ ಸಹ ಗಮನ ಸೆಳೆಯುವ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಲಿಲ್ಲ. ರುತುರಾಜ್ ಗಾಯಕ್ವಾಡ್ 4 ರನ್, ತಿಲಕ್ ವರ್ಮಾ 10, ಸಂಜು ಸ್ಯಾಮ್ಸನ್ 12, ರಿಂಕು ಸಿಂಗ್ 17, ಅಕ್ಷರ್ ಪಟೇಲ್ 7, ಕುಲ್‌ದೀಪ್ ಯಾದವ್ 1, ಅರ್ಷ್‌ದೀಪ್ ಸಿಂಗ್ 18, ಅವೇಶ್ ಖಾನ್ 9 ಹಾಗೂ ಮುಖೇಶ್ ಕುಮಾರ್ ಅಜೇಯ 4 ರನ್ ಕಲೆಹಾಕಿದರು.
ದಕ್ಷಿಣ ಆಫ್ರಿಕಾ ಪರ ನಂಡ್ರೆ ಬರ್ಗರ್ 3 ವಿಕೆಟ್, ಬ್ಯೂರನ್ ಹೆಂಡ್ರಿಕ್ಸ್ ಹಾಗೂ ಕೇಶವ್ ಮಹಾರಾಜ್ ತಲಾ 2 ವಿಕೆಟ್ ಮತ್ತು ಲಿಜಾರ್ಡ್ ವಿಲಿಯಮ್ಸ್ ಹಾಗೂ ಏಡನ್ ಮಾರ್ಕ್ರಮ್ ತಲಾ ಒಂದೊಂದು ವಿಕೆಟ್ ಪಡೆದರು.
ದಕ್ಷಿಣ ಆಫ್ರಿಕಾ ಇನ್ನಿಂಗ್ಸ್: ಭಾರತ ನೀಡಿದ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಪರ ಆರಂಭಿಕರಾಗಿ ಕಣಕ್ಕಿಳಿದ ರೀಜಾ ಹೆಡ್ರಿಕ್ಸ್ ಹಾಗೂ ಟೋನಿ ಡಿ ಝೋರ್ಝಿ 130 ರನ್ ಜತೆಯಾಟ ಆಡುವುದರ ಮೂಲಕ ಒಳ್ಳೆಯ ಆರಂಭ ಕಟ್ಟಿಕೊಟ್ಟರು. ರೀಜಾ ಹೆಂಡ್ರಿಕ್ಸ್ 52 ರನ್ ಗಳಿಸಿ ಔಟ್ ಆದರೆ ಟೋನಿ ಡಿ ಝೋರ್ಝಿ 119 ರನ್ ಗಳಿಸಿ ಅಜೇಯರಾಗಿ ಉಳಿದರು. ಇನ್ನುಳಿದಂತೆ ರಸ್ಸಿ ವಾಂಡರ್ ಡಸನ್ 36 ರನ್ ಹಾಗೂ ನಾಯಕ ಮಾರ್ಕ್ರಮ್ ಅಜೇಯ 2 ರನ್ ಗಳಿಸಿದರು.
ಭಾರತದ ಪರ ರಿಂಕು ಸಿಂಗ್, ಸಾಯಿ ಸುದರ್ಶನ್ ಸೇರಿದಂತೆ ಒಟ್ಟು ಎಂಟು ಆಟಗಾರರು ಬೌಲಿಂಗ್ ಮಾಡಿದ್ದು, ಈ ಪೈಕಿ ರಿಂಕು ಸಿಂಗ್ ಹಾಗೂ ಅರ್ಷದೀಪ್ ಸಿಂಗ್ ಮಾತ್ರ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್ಹೌಸ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…