BREAKING NEWS

IND vs SA 2nd ODI: ಸುಲಭ ಜಯ ಕಂಡು ಸರಣಿಯಲ್ಲಿ ಸಮಬಲ ಸಾಧಿಸಿದ ಹರಿಣಗಳು

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ ಸರಣಿಯಲ್ಲಿ ಸಮಬಲ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಗೆದ್ದು ಮುನ್ನಡೆ ಸಾಧಿಸಿದ್ದ ಭಾರತ ಇಂದು ( ಡಿಸೆಂಬರ್‌ 19 ) ಜಿಕೆಬರ್ಹಾದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಸೋಲನ್ನು ಕಂಡಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಬ್ಯಾಟಿಂಗ್‌ ಮಾಡಿದ ಭಾರತ 46.2 ಓವರ್‌ಗಳಲ್ಲಿ 211 ರನ್‌ ಕಲೆಹಾಕಿ ಆಲ್‌ಔಟ್‌ ಆಗಿ ಎದುರಾಳಿ ದಕ್ಷಿಣ ಆಫ್ರಿಕಾಗೆ ಗೆಲ್ಲಲು 212 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ದಕ್ಷಿಣ ಆಫ್ರಿಕಾ 42.3 ಓವರ್‌ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಹರಿಣಗಳು 3 ಪಂದ್ಯಗಳ ಏಕದಿನ  ಸರಣಿಯಲ್ಲಿ 1 – 1 ಅಂತರದಿಂದ ಸಮಬಲ‌ ಸಾಧಿಸಿದೆ.

 

ಭಾರತದ ಇನ್ನಿಂಗ್ಸ್: ಟೀಮ್‌ ಇಂಡಿಯಾ ಪರ ನಾಯಕ ಕೆಎಲ್‌ ರಾಹುಲ್‌ ಹಾಗೂ ಸಾಯಿ ಸುದರ್ಶನ್‌ ಅರ್ಧಶತಕ ಬಾರಿಸುವ ಮೂಲಕ ಜವಾಬ್ದಾರಿಯುತ ಆಟವನ್ನಾಡಿದ್ದಾರೆ. ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಶನ್‌ 62 ರನ್‌ ಗಳಿಸಿದರೆ, ನಾಯಕ ರಾಹುಲ್‌ 56 ರನ್‌ ಬಾರಿಸಿದರು.

ಇನ್ನುಳಿದಂತೆ ಭಾರತದ ಯಾವ ಆಟಗಾರನೂ ಸಹ ಗಮನ ಸೆಳೆಯುವ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಲಿಲ್ಲ. ರುತುರಾಜ್‌ ಗಾಯಕ್ವಾಡ್‌ 4 ರನ್‌, ತಿಲಕ್‌ ವರ್ಮಾ 10, ಸಂಜು ಸ್ಯಾಮ್ಸನ್‌ 12, ರಿಂಕು ಸಿಂಗ್‌ 17, ಅಕ್ಷರ್‌ ಪಟೇಲ್‌ 7, ಕುಲ್‌ದೀಪ್‌ ಯಾದವ್‌ 1, ಅರ್ಷ್‌ದೀಪ್‌ ಸಿಂಗ್‌ 18, ಅವೇಶ್‌ ಖಾನ್‌ 9 ಹಾಗೂ ಮುಖೇಶ್‌ ಕುಮಾರ್‌ ಅಜೇಯ 4 ರನ್‌ ಕಲೆಹಾಕಿದರು.

ದಕ್ಷಿಣ ಆಫ್ರಿಕಾ ಪರ ನಂಡ್ರೆ ಬರ್ಗರ್‌ 3 ವಿಕೆಟ್‌, ಬ್ಯೂರನ್‌ ಹೆಂಡ್ರಿಕ್ಸ್‌ ಹಾಗೂ ಕೇಶವ್‌ ಮಹಾರಾಜ್‌ ತಲಾ 2 ವಿಕೆಟ್‌ ಮತ್ತು ಲಿಜಾರ್ಡ್‌ ವಿಲಿಯಮ್ಸ್‌ ಹಾಗೂ ಏಡನ್‌ ಮಾರ್ಕ್ರಮ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ದಕ್ಷಿಣ ಆಫ್ರಿಕಾ ಇನ್ನಿಂಗ್ಸ್: ಭಾರತ ನೀಡಿದ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಪರ ಆರಂಭಿಕರಾಗಿ ಕಣಕ್ಕಿಳಿದ ರೀಜಾ ಹೆಡ್ರಿಕ್ಸ್ ಹಾಗೂ ಟೋನಿ ಡಿ ಝೋರ್ಝಿ 130 ರನ್ ಜತೆಯಾಟ ಆಡುವುದರ ಮೂಲಕ ಒಳ್ಳೆಯ ಆರಂಭ ಕಟ್ಟಿಕೊಟ್ಟರು. ರೀಜಾ ಹೆಂಡ್ರಿಕ್ಸ್ 52 ರನ್ ಗಳಿಸಿ ಔಟ್ ಆದರೆ ಟೋನಿ ಡಿ ಝೋರ್ಝಿ 119 ರನ್ ಗಳಿಸಿ ಅಜೇಯರಾಗಿ ಉಳಿದರು. ಇನ್ನುಳಿದಂತೆ ರಸ್ಸಿ ವಾಂಡರ್ ಡಸನ್ 36 ರನ್ ಹಾಗೂ ನಾಯಕ ಮಾರ್ಕ್ರಮ್ ಅಜೇಯ 2 ರನ್ ಗಳಿಸಿದರು.

ಭಾರತದ ಪರ ರಿಂಕು ಸಿಂಗ್, ಸಾಯಿ ಸುದರ್ಶನ್ ಸೇರಿದಂತೆ ಒಟ್ಟು ಎಂಟು ಆಟಗಾರರು ಬೌಲಿಂಗ್ ಮಾಡಿದ್ದು, ಈ ಪೈಕಿ ರಿಂಕು ಸಿಂಗ್ ಹಾಗೂ ಅರ್ಷದೀಪ್ ಸಿಂಗ್ ಮಾತ್ರ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ‌.

andolana

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

6 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

7 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

8 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

11 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

12 hours ago