ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಮ್ ಇಂಡಿಯಾ ಸದ್ಯ ಟೆಸ್ಟ್ ಸರಣಿಯಲ್ಲಿ ನಿರತವಾಗಿದ್ದು, ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತ ಬಳಿಕ ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲಿ ಪುಟಿದೆದ್ದಿದೆ. ಇಂದಿನಿಂದ ( ಜನವರಿ 3 ) ಎರಡನೇ ಟೆಸ್ಟ್ ಪಂದ್ಯ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿ ಮೊದಲ ಇನ್ನಿಂಗ್ಸ್‌ನಲ್ಲಿ 23.2 ಓವರ್‌ಗೆ ಕೇವಲ 55 ರನ್‌ಗಳಿಗೆ ಆಲ್ ಔಟ್ ಆಗಿದೆ.
ಭಾರತದ ಪರ ಮೊಹಮ್ಮದ್ ಸಿರಾಜ್ 6 ವಿಕೆಟ್‌ಗಳನ್ನು ಕಬಳಿಸಿ ಭರ್ಜರಿ ಪ್ರದರ್ಶನ ನೀಡಿದರೆ, ಜಸ್‌ಪ್ರೀತ್ ಬುಮ್ರಾ ಹಾಗೂ ಮುಖೇಶ್ ಕುಮಾರ್ ತಲಾ ಒಂದೊಂದು ವಿಕೆಟ್ ಪಡೆದರು. ದಕ್ಷಿಣ ಆಫ್ರಿಕಾ ಪರ ಏಡನ್ ಮಾರ್ಕ್ರಮ್ 2, ಡೀನ್ ಎಲ್ಗರ್ 4, ಟೋನಿ ಡಿ ಝೋರ್ಝಿ 2, ಟ್ರಿಸ್ಟನ್ ಸ್ಟಬ್ಸ್ 3, ಡೇವಿಡ್ ಬೆಡಿಂಗ್‌ಹ್ಯಾಮ್ 12, ಕೈಲ್ ವೆರೆಯ್ನ್ 15, ಮಾರ್ಕೊ ಯಾನ್‌ಸೆನ್ 0, ಕೇಶವ್ ಮಹಾರಾಜ್ 3, ಕಗಿಸೋ ರಬಾಡಾ 5, ನಾಂದ್ರೆ ಬರ್ಗರ್ 4 ಹಾಗೂ ಲುಂಗಿ ಎನ್‌ಗಿಡಿ ಯಾವುದೇ ರನ್ ಗಳಿಸದೇ ಅಜೇಯರಾಗಿ ಉಳಿದರು.





