ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದ್ದು, ಇಂದು ( ಡಿಸೆಂಬರ್ 21 ) ಪಾರ್ಲ್‌ನ ಬೋಲ್ಯಾಂಡ್ ಪಾರ್ಕ್ ಕ್ರೀಡಾಂಗಣದಲ್ಲಿ ಅಂತಿಮ ಪಂದ್ಯ ನಡೆಯುತ್ತಿದೆ. ಎರಡೂ ತಂಡಗಳೂ ಸಹ ತಲಾ ಒಂದೊಂದು ಪಂದ್ಯದಲ್ಲಿ ಗೆದ್ದಿರುವುದರಿಂದ ಇಂದಿನ ಪಂದ್ಯ ಸರಣಿಯ ಫೈನಲ್ ಪಂದ್ಯವಾಗಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ದುಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ಟೀಮ್ ಇಂಡಿಯಾ ಸಂಜು ಸ್ಯಾಮ್ಸನ್ ಶತಕ ಹಾಗೂ ತಿಲಕ್ ವರ್ಮಾ ಅರ್ಧಶತಕದ ನೆರವಿನಿಂದ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 296 ರನ್ ಕಲೆಹಾಕಿ ದಕ್ಷಿಣ ಆಫ್ರಿಕಾಗೆ ಗೆಲ್ಲಲು 297 ರನ್‌ಗಳ ಗುರಿಯನ್ನು ನೀಡಿದೆ.
ಭಾರತದ ಪರ ಆರಂಭಿಕರಾಗಿ ರಜತ್ ಪಟಿದಾರ್ 22 ರನ್ ಗಳಿಸಿದರೆ, ಸಾಯಿ ಸುದರ್ಶನ್ 10 ರನ್ ಕಲೆಹಾಕಿದರು. ಸಂಜು ಸ್ಯಾಮ್ಸನ್ 114 ಎಸೆತಗಳಲ್ಲಿ 108 ರನ್ ಬಾರಿಸಿ ತಮ್ಮ ಅಂತಾರಾಷ್ಟ್ರಿಯ ಕ್ರಿಕೆಟ್ ಕೆರಿಯರ್‌ನ ಚೊಚ್ಚಲ ಸೆಂಚುರಿ ಸಿಡಿಸಿ ಉತ್ತಮ ಪ್ರದರ್ಶನ ನೀಡಿದರು. ನಾಯಕ ಕೆಎಲ್ ರಾಹುಲ್ 21 ರನ್, ತಿಲಕ್ ವರ್ಮಾ 52 ರನ್, ಅಕ್ಷರ್ ಪಟೇಲ್ 1 ರನ್, ವಾಷಿಂಗ್ಟನ್ ಸುಂದರ್ 14, ರಿಂಕು ಸಿಂಗ್ 38, ಅರ್ಷ್‌ದೀಪ್ ಸಿಂಗ್ ಅಜೇಯ 7 ಹಾಗೂ ಅವೇಶ್ ಖಾನ್ ಅಜೇಯ 1 ರನ್ ಕಲೆಹಾಕಿದರು.
ದಕ್ಷಿಣ ಆಫ್ರಿಕಾ ಪರ ಬ್ಯೂರನ್ ಹೆಂಡ್ರಿಕ್ಸ್ 3 ವಿಕೆಟ್ ಪಡೆದರೆ, ನಾಂಡ್ರೆ ಬರ್ಗರ್ 2 ವಿಕೆಟ್ ಹಾಗೂ ಲಿಜಾರ್ಡ್ ವಿಲಿಯಮ್ಸ್, ವಿಯಾನ್ ಮಲ್ಡರ್ ಮತ್ತು ಕೇಶವ್ ಮಹಾರಾಜ್ ತಲಾ ಒಂದೊಂದು ವಿಕೆಟ್ ಪಡೆದರು.





