Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಗೆದ್ದ ಭಾರತ ವನಿತೆಯರ ತಂಡ

ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ವನಿತೆಯರ ಕ್ರಿಕೆಟ್‌ ತಂಡ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ ಏಕೈಕ ಟೆಸ್ಟ್‌ ಪಂದ್ಯವನ್ನು ಆಡಿದೆ. ಮೊದಲಿಗೆ ನಡೆದ ಟಿ ಟ್ವೆಂಟಿ ಸರಣಿಯಲ್ಲಿ 1-2 ಅಂತರದಿಂದ ಸೋತ ಭಾರತೀಯ ವನಿತೆಯರು ಇದೀಗ ಟೆಸ್ಟ್‌ ಪಂದ್ಯವನ್ನು ಗೆಲ್ಲುವ ಮೂಲಕ ಟಿ ಟ್ವೆಂಟಿ ಸರಣಿ ಸೋಲಿಗೆ ಪ್ರತೀಕಾರ ತೀರಿಸಿಕೊಂಡಿದೆ.‌

ಡಿಸೆಂಬರ್‌ 14ರಂದು ಮುಂಬೈನ ಡಿವೈ ಪಾಟೀಲ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಆರಂಭವಾದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಮಧ್ಯಮ ಕ್ರಮಾಂಕದ ಎಲ್ಲಾ ಆಟಗಾರರ ಅಮೋಘ ಪ್ರದರ್ಶನದ ನೆರವಿನಿಂದ 104.3 ಓವರ್‌ಗಳಲ್ಲಿ 428 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು.

ಇಂಗ್ಲೆಂಡ್‌ ವನಿತೆಯರ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 136 ರನ್‌ಗಳಿಗೆ ಆಲ್‌ಔಟ್‌ ಆಯಿತು. ಈ ಇನ್ನಿಂಗ್ಸ್‌ನಲ್ಲಿ ಭಾರತದ ದೀಪ್ತಿ ಶರ್ಮಾ ಐದು ವಿಕೆಟ್‌ಗಳ ಗೊಂಚಲನ್ನು ಪಡೆದರು. ಮೊದಲ ಇನ್ನಿಂಗ್ಸ್‌ನಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಭಾರತದ ವನಿತೆಯರು 292 ರನ್‌ಗಳ ಮುನ್ನಡೆಯನ್ನು ಕಾಯ್ದುಕೊಂಡಿತು.

ಬಳಿಕ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 42 ಓವರ್‌ಗಳಿಗೆ 6 ವಿಕೆಟ್‌ ಕಳೆದುಕೊಂಡು 186 ರನ್‌ ಗಳಿಸಿದ ಭಾರತೀಯ ವನಿತೆಯರು ಲೀಡ್‌ ಸೇರಿದಂತೆ ಒಟ್ಟು 478 ರನ್‌ ಕಲೆಹಾಕಿ ಎದುರಾಳಿ ಇಂಗ್ಲೆಂಡ್‌ ತಂಡಕ್ಕೆ ಗೆಲ್ಲಲು 479 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ಇಂಗ್ಲೆಂಡ್‌ ವನಿತೆಯರು ಮೊದಲ ಇನ್ನಿಂಗ್ಸ್‌ ರೀತಿಯೇ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಸಹ ರನ್‌ ಗಳಿಸಲು ಪರದಾಡಿದರು. 27.3 ಓವರ್‌ಗಳಲ್ಲಿ ಕೇವಲ 131 ರನ್‌ ಕಲೆಹಾಕಿ ಆಲ್‌ಔಟ್‌ ಆದರು. ಈ ಮೂಲಕ ಭಾರತ 347 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿತು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ