ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ವನಿತೆಯರ ಕ್ರಿಕೆಟ್ ತಂಡ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ ಏಕೈಕ ಟೆಸ್ಟ್ ಪಂದ್ಯವನ್ನು ಆಡಿದೆ. ಮೊದಲಿಗೆ ನಡೆದ ಟಿ ಟ್ವೆಂಟಿ ಸರಣಿಯಲ್ಲಿ 1-2 ಅಂತರದಿಂದ ಸೋತ ಭಾರತೀಯ ವನಿತೆಯರು ಇದೀಗ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಟಿ ಟ್ವೆಂಟಿ ಸರಣಿ ಸೋಲಿಗೆ ಪ್ರತೀಕಾರ ತೀರಿಸಿಕೊಂಡಿದೆ.
ಡಿಸೆಂಬರ್ 14ರಂದು ಮುಂಬೈನ ಡಿವೈ ಪಾಟೀಲ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭವಾದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಮಧ್ಯಮ ಕ್ರಮಾಂಕದ ಎಲ್ಲಾ ಆಟಗಾರರ ಅಮೋಘ ಪ್ರದರ್ಶನದ ನೆರವಿನಿಂದ 104.3 ಓವರ್‌ಗಳಲ್ಲಿ 428 ರನ್‌ಗಳಿಗೆ ಆಲ್‌ಔಟ್ ಆಗಿತ್ತು.
ಇಂಗ್ಲೆಂಡ್ ವನಿತೆಯರ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 136 ರನ್‌ಗಳಿಗೆ ಆಲ್‌ಔಟ್ ಆಯಿತು. ಈ ಇನ್ನಿಂಗ್ಸ್‌ನಲ್ಲಿ ಭಾರತದ ದೀಪ್ತಿ ಶರ್ಮಾ ಐದು ವಿಕೆಟ್‌ಗಳ ಗೊಂಚಲನ್ನು ಪಡೆದರು. ಮೊದಲ ಇನ್ನಿಂಗ್ಸ್‌ನಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಭಾರತದ ವನಿತೆಯರು 292 ರನ್‌ಗಳ ಮುನ್ನಡೆಯನ್ನು ಕಾಯ್ದುಕೊಂಡಿತು.
ಬಳಿಕ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 42 ಓವರ್‌ಗಳಿಗೆ 6 ವಿಕೆಟ್ ಕಳೆದುಕೊಂಡು 186 ರನ್ ಗಳಿಸಿದ ಭಾರತೀಯ ವನಿತೆಯರು ಲೀಡ್ ಸೇರಿದಂತೆ ಒಟ್ಟು 478 ರನ್ ಕಲೆಹಾಕಿ ಎದುರಾಳಿ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 479 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ಇಂಗ್ಲೆಂಡ್ ವನಿತೆಯರು ಮೊದಲ ಇನ್ನಿಂಗ್ಸ್ ರೀತಿಯೇ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಸಹ ರನ್ ಗಳಿಸಲು ಪರದಾಡಿದರು. 27.3 ಓವರ್‌ಗಳಲ್ಲಿ ಕೇವಲ 131 ರನ್ ಕಲೆಹಾಕಿ ಆಲ್‌ಔಟ್ ಆದರು. ಈ ಮೂಲಕ ಭಾರತ 347 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿತು.
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…