BREAKING NEWS

ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ದಾಟಲು ಯತ್ನಿಸಿದ ಮೂವರು ಭಯೋತ್ಪಾದಕರನ್ನು ಶನಿವಾರ ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಭಯೋತ್ಪಾದಕರು ತಪ್ಪಿಸಿಕೊಳ್ಳಲು ಪಾಕಿಸ್ತಾನಿ ಸೈನಿಕರು ನೆರವಿಗೆ ಯತ್ನಿಸಿದ್ದರು ಎಂದು ಭಾರತೀಯ ಸೇನೆ ಹೇಳಿದೆ.

ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಲು ಇಂಟೆಲ್ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೀರ್ ಪಂಜಾಲ್ ಬ್ರಿಗೇಡ್‌ನ ಕಮಾಂಡರ್ ಬ್ರಿಗೇಡಿಯರ್ ಪಿಎಂಎಸ್ ಧಿಲ್ಲೋನ್ ತಿಳಿಸಿದ್ದಾರೆ.

ಮೂವರು ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸಿದರು. ಮೊದಲು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಯಿತು. ನಂತರ ಮೂರನೇ ಭಯೋತ್ಪಾದಕನನ್ನು ಹತ್ಯೆ ಮಾಡಲಾಯಿತು. ಆರಂಭದಲ್ಲಿ ಭಯೋತ್ಪಾದಕರು ತಪ್ಪಿಸಿಕೊಳ್ಳುವುದಕ್ಕೆ ನೆರವಾಗಲು ಪಾಕ್‌ ಸೈನಿಕರು ಮುಂದಾದರು. ಆದರೆ ಅವರ ಪ್ರಯತ್ನಿ ವಿಫಲವಾಯಿತು. ಅಷ್ಟರೊಳಗೆ ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿತು. ಭಯೋತ್ಪಾದಕರ ಮೃತದೇಹವನ್ನು ಪಡೆಯಲು ಎಲ್ಒಸಿ ಸಮೀಪದಲ್ಲಿ ಪಾಕ್‌ ಸೈನಿಕರು ಗುಂಡಿನ ದಾಳಿ ನಡೆಸಿದ್ದರು ಎಂದು ಸೇನೆ ತಿಳಿಸಿದೆ.

ಭಯೋತ್ಪಾದಕರ ಬಳಿಯಿದ್ದ ಎರಡು ಎಕೆ ರೈಫಲ್‌, ಒಂದು ಪಿಸ್ತೂಲ್, ಏಳು ಹ್ಯಾಂಡ್ ಗ್ರೆನೇಡ್‌, ಒಂದು ಸುಧಾರಿತ ಸ್ಫೋಟಕ ಸಾಧನ (ಐಇಡಿ), ಪಾಕಿಸ್ತಾನದ ಕರೆನ್ಸಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆ ತಿಳಿಸಿದೆ.

2021ರ ಫೆಬ್ರವರಿಯಲ್ಲಿ, ಗಡಿಗಳಲ್ಲಿ ಪರಸ್ಪರ ಶಾಂತಿ ಸಾಧಿಸುವ ಹಿತಾಸಕ್ತಿಯಿಂದ ಭಾರತ ಮತ್ತು ಪಾಕಿಸ್ತಾನದ ಸೇನೆಗಳು ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಗುಂಡಿನ ದಾಳಿಯನ್ನು ನಿಲ್ಲಿಸಲು ಒಪ್ಪಿಕೊಂಡಿದ್ದವು. ಆದರೆ ಈಗ ಮತ್ತೆ ಅಶಾಂತಿ ವಾತಾವರಣ ಸೃಷ್ಟಿಯಾಗಿದೆ. ಅನಂತನಾಗ್ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್‌ಕೌಂಟರ್ ಶನಿವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಎನ್‌ಕೌಂಟರ್‌ನಲ್ಲಿ ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

lokesh

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

6 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

8 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

9 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

9 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

9 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

10 hours ago