ಬೆಂಗಳೂರು : ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಬುಧವಾರ ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ.
ಈ ಮೂಲಕ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿದೆ.
ಈ ಕುರಿತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ತಿಳಿಸಿದ್ದು ಚಂದ್ರನ ಕಕ್ಷೆಗೆ ಅಂತಿಮ ಪರಿಚಲನೆ ಪೂರ್ಣಗೊಂಡಿದೆ ಎಂದು ಹೇಳಿದೆ.
ಈಗ ಲ್ಯಾಂಡರ್ ಮಾಡ್ಯೂಲ್ ನಿಂದ ಉಡ್ಡಯನ ವಾಹಕ ಪ್ರತ್ಯೇಕಿಸುವ ಸಮಯ. ಇದಕ್ಕೆ ಆಗಸ್ಟ್ 17ರಂದು ಮುಹೂರ್ತ ನಿಗದಿಯಾಗಿದೆ ಎಂದು ತಿಳಿಸಿದೆ.
ಜು.14ರಂದು ಉಡಾವಣೆಯಾದ ಚಂದ್ರಯಾನ-3 ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಆದಾದ ನಂತರ ಸತತ 3 ಕಕ್ಷೆ ಪರಿಚಲನೆ ಮೂಲಕ ಚಂದ್ರನ ಮೇಲ್ಮೈಯ ಸನಿಹಕ್ಕೆ ತಲುಪಿದೆ. ಆಗಸ್ಟ್ 23ರಂದು ಸಾಫ್ಟ್ ಲ್ಯಾಂಡಿಂಗ್ ಮೂಲಕ ಚಂದ್ರನ ಮೇಲ್ಮೈ ಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಯೋಜಿಸಲಾಗಿದೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…