BREAKING NEWS

2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ಭಾರತ ಪ್ರಯತ್ನ: ಪ್ರಧಾನಿ ಮೋದಿ

ಮುಂಬೈ : ಏಷ್ಯನ್ ಗೇಮ್ಸ್ ನಲ್ಲಿ ಇದೇ ಮೊದಲ ಬಾರಿಗೆ ಪದಕ ಗಳಿಕೆಯಲ್ಲಿ ಭಾರತ ಶತಕ ಸಾಧನೆ ಮಾಡಿರುವ ಬೆನ್ನಲ್ಲೇ, ವಿಶ್ವದ ಅತಿದೊಡ್ಡ ಕ್ರೀಡಾ ಉತ್ಸವವಾದ ಒಲಿಂಪಿಕ್ಸ್ ಕೂಟವನ್ನು ಭಾರತದಲ್ಲಿ ಆಯೋಜಿಸುವ ಪ್ರಯತ್ನವನ್ನು ಭಾರತ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. 2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ಭಾರತ ಬಿಡ್ ಮಾಡಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ಭಾರತ ಮುಂದಾಗುವ ನಿರ್ಧಾರ ಅಚಲ. ಒಲಿಂಪಿಕ್ಸ್ ಕ್ರೀಡೆಗಳ ಆತಿಥ್ಯ ವಹಿಸಲು ಭಾರತ ಉತ್ಸುಕವಾಗಿದೆ. ಇದು 140 ಕೋಟಿ ಭಾರತೀಯರ ಹಲವು ವರ್ಷಗಳ ಕನಸು ಮತ್ತು ಬಯಕೆ ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ 141ನೇ ಅಧಿವೇಶನದಲ್ಲಿ ಮಾತನಾಡಿದ ಅವರು ಹೇಳಿದರು.

“ಈ ಕನಸನ್ನು ನಿಮ್ಮ ಸಹಭಾಗಿತ್ವ ಮತ್ತು ಸಹಕಾರದಲ್ಲಿ ಇದನ್ನು ನನಸುಗೊಳಿಸಲು ನಾವು ಬಯಸುತ್ತೇವೆ. ಈ ನಿಟ್ಟಿನಲ್ಲಿ ಭಾರತ ಐಓಸಿಯ ಸಹಕಾರ ದೊರಕುತ್ತದೆ ಎಂಬ ವಿಶ್ವಾಸವಿದೆ” ಎಂದರು. ಭಾರತದಲ್ಲಿ ಕ್ರೀಡೆಯ ಸಂಪ್ರದಾಯ ಸಿಂಧೂ ಕಣಿವೆ ನಾಗರೀಕತೆಯಷ್ಟು ಹಳೆಯದು ಎಂದ ಅವರು, ಭಾರತೀಯರು ಕ್ರೀಡಾಪ್ರೇಮಿಗಳು ಮಾತ್ರವಲ್ಲ, ಅದು ಅವರ ಜೀವ. ದೇಶ ಕೂಡಾ 2029ರ ಯುವ ಒಲಿಂಪಿಕ್ಸ್ ನ ಆತಿಥ್ಯಕ್ಕೂ ಉತ್ಸುಕವಾಗಿದೆ” ಎಂದು ಸ್ಪಷ್ಟಪಡಿಸಿದರು.

ಭಾರತಕ್ಕೆ ಜಾಗತಿಕ ಕೂಟವನ್ನು ಆಯೋಜಿಸಲು ಅಗತ್ಯವಾದ ಮೂಲಸೌಕರ್ಯ, ಲಾಜಿಸ್ಟಿಕ್ಸ್ ಮತ್ತು ಅಗತ್ಯ ಸಂಘಟನಾ ಸಾಮರ್ಥ್ಯ ಇದೆ. ಜಿ20 ಶೃಂಗ ಮತ್ತು ಅಧ್ಯಕ್ಷತೆಯನ್ನು ಉದಾಹರಿಸಿದ ಅವರು 60ಕ್ಕೂ ಹೆಚ್ಚು ನಗರಗಳಲ್ಲಿ ಈ ಸಂಬಂಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದು ಪ್ರತಿ ವಲಯದಲ್ಲೂ ಭಾರತದ ಸಂಘಟನಾ ಸಾಮರ್ಥ್ಯಕ್ಕೆ ಉದಾಹರಣೆ ಎಂದು ಬಣ್ಣಿಸಿದರು.

https://x.com/the_newsmen/status/1713260869566734606?s=20

andolanait

Recent Posts

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…

6 hours ago

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

8 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

8 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

9 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

9 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

11 hours ago