Mysore
23
broken clouds

Social Media

ಭಾನುವಾರ, 20 ಏಪ್ರಿಲ 2025
Light
Dark

ಕರಾಚಿಯಲ್ಲಿ ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಟೆರರಿಸ್ಟ್‌ ಹತ್ಯೆ

ಇಸ್ಲಾಮಾಬಾದ್‌ : ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ಟೆರರಿಸ್ಟ್‌ ಪಾಕಿಸ್ತಾನದ ಕರಾಚಿಯಲ್ಲಿ ಗುಂಡೇಟಿಗೆ ಬಲಿಯಾಗಿದ್ದಾನೆ.

ನಿಷೇಧಿತ ಲಷ್ಕರ್‌-ಇ-ತೊಯ್ಬಾ ಸಂಘಟನೆಯ ಸ್ಥಾಪಕ ಸದಸ್ಯ ಉಗ್ರ ಖೈಸರ್ ಫಾರೂಕ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾನೆ.

ಕರಾಚಿಯ ಬೀದಿಯಲ್ಲಿ ಇತರ ವ್ಯಕ್ತಿಗಳ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಫಾರೂಕ್‌ ಮೇಲೆ ದಾಳಿ ನಡೆದಿದೆ. ಈತ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್‌ ಸಯೀದ್‌ನ ಆಪ್ತ ಸಹಾಯಕನಾಗಿದ್ದ.

ಮಂಗಳವಾರ ಹಫೀಜ್‌ ಸಯೀದ್‌ ಪುತ್ರ ಕಮಾಲುದ್ದೀನ್ ಸಯೀದ್‌ನನ್ನು ಅಪಹರಣ ಮಾಡಲಾಗಿತ್ತು. ಪೇಶಾವರದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕಮಾಲುದ್ದೀನ್ ಸಯೀದ್‌ನನ್ನು ಅಪಹರಣ ಮಾಡಿದ್ದರು. ಇಲ್ಲಿಯವರೆಗೆ ಕಮಾಲುದ್ದೀನ್‌ ಸಯೀದ್‌ ಎಲ್ಲಿದ್ದಾನೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಆತನನ್ನು ಹತ್ಯೆ ಮಾಡಲಾಗಿದೆ ಎಂಬ ವಿಚಾರ ಚರ್ಚೆ ಆಗುತ್ತಿದೆ.

2008 ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನು ನಡೆಸಿ 166 ಜನರನ್ನು ಕೊಂದಿದ್ದರು. 300 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದರು.

ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ