ಇಂದೋರ್: ಚುನಾವಣಾ ಇತಿಹಾಸದಲ್ಲೇ ಅತಿ ಹೆಚ್ಚು ನೋಟಾ ಮತಗಳ ಚಲಾವಣೆಗೆ ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರ ಸಾಕ್ಷಿಯಾಗಿದೆ.
ಇಂದೋರ್‌ನಲ್ಲಿ 2.18 ಲಕ್ಷ ಜನರು NONE OF THE ABOVE (NOTA) ‘ಮೇಲಿನ ಯಾರೂ ಅಲ್ಲ’ ಆಯ್ಕೆಯನ್ನು ಒತ್ತಿದ್ದಾರೆ. ಇದರೊಂದಿಗೆ ಚುನಾವಣಾ ಇತಿಹಾಸದಲ್ಲೇ ಕ್ಷೇತ್ರವೊಂದರಲ್ಲಿ ಅತಿ ಹೆಚ್ಚು ನೋಟಾ ಮತ ಚಲಾವಣೆಯಾದಂತಾಗಿದೆ. ವಿಪರ್ಯಾಸ ಎಂದರೆ ಈ ಕ್ಷೇತ್ರದಲ್ಲಿ ನೋಟಾ ಎರಡನೇ ಸ್ಥಾನ ಪಡೆದಿರುವುದು ಆಶ್ಚರ್ಯವಾಗಿದೆ.
ಬಿಜೆಪಿ ಅಭ್ಯರ್ಥಿ ಶಂಕರ್ ಲಲ್ವಾನಿ ಅವರು 12,26,571 ಮತಗಳನ್ನು ಪಡೆದು ವಿಜಯಶಾಲಿಯಾಗಿದ್ದಾರೆ. ಅವರ ಹತ್ತಿರದ ಪ್ರತಿಸ್ಪರ್ಧಿ ಬಹುಜನ ಸಮಾಜವಾದಿ ಪಕ್ಷ ಸಂಜಯ್ ಅವರು 51,659 ಮತಗಳನ್ನು ಪಡೆದಿದ್ದಾರೆ. ಸಂಜಯ್ ಅವರಿಗಿಂತಲೂ ಹೆಚ್ಚು (2,18,674) ನೋಟಾ ಮತಗಳು ಚಲಾವಣೆಯಾಗಿರುವುದು ವಿಶೇಷ ಹಾಗೂ ಆಶ್ಚರ್ಯಕರ.
2019ರಲ್ಲಿ ಬಿಹಾರದ ಎಸ್‌ಸಿ ಮೀಸಲು ಕ್ಷೇತ್ರ ಗೋಪಾಲ್‌ಗಂಜ್‌ನಲ್ಲಿ 51,660 ನೋಟಾ ಮತಗಳು ದಾಖಲಾಗಿದ್ದವು. ಇದು ಈವರೆಗಿನ ದಾಖಲೆಯಾಗಿತ್ತು. 2014 ರಲ್ಲಿ ತಮಿಳುನಾಡಿನ ನೀಲಗಿರಿ ಕ್ಷೇತ್ರದಲ್ಲಿ 46,559 ನೋಟಾ ಮತಗಳು ಚಲಾವಣೆಗೊಂಡಿದ್ದವು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…