ಇಂದೋರ್ (ಮಧ್ಯ ಪ್ರದೇಶ): ನಗರದ ಬಲೇಶ್ವರ್ ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲುಬಾವಿ ದುರಂತಕ್ಕೆ ಸಾವಿಗೀಡಾದವರ ಸಂಖ್ಯೆ ಶುಕ್ರವಾರ 35ಕ್ಕೆ ಏರಿದ್ದು, ಒಬ್ಬರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಗುರುವಾರ ರಾಮನವಮಿ ಆಚರಣೆ ವೇಳೆ ದೇವಸ್ಥಾನದಲ್ಲಿ ಜನ ದಟ್ಟಣೆ ಏರ್ಪಟ್ಟಿತ್ತು. ಅಲ್ಲಿರುವ ಬಾವಿಯಲ್ಲಿ ಪವಿತ್ರ ಸ್ನಾನ ಮಾಡಲು ಭಕ್ತರ ದಂಡು ಜಮಾಯಿಸಿತ್ತು. ಈ ವೇಳೆ ನಾಲ್ಕು ದಶಕಗಳಷ್ಟು ಹಳೆಯ ಮೆಟ್ಟಿಲು ಕುಸಿದಿದೆ. ಪರಿಣಾಮ ಅದರ ಮೇಲೆ ನಿಂತಿದ್ದ ಹಲವಾರು ಜನರು ಬಾವಿಗೆ ಬಿದ್ದಿದ್ದು, 11 ಜನರ ಮೃತದೇಹವನ್ನು ಅಗ್ನಿಶಾಮಕ ದಳದವರು ಹೊರತೆಗೆದಿದ್ದರು. ಉಳಿದವರ ಪತ್ತೆಗಾಗಿ ಎನ್‌ಡಿಆರ್‌ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ) ಹಾಗೂ ಸೇನೆಯ ಸಹಾಯದಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.
’ಅವಘಡದಲ್ಲಿ ಗಾಯಗೊಂಡ 16 ಮಂದಿಯನ್ನು ಆಸ್ಪತ್ರೆಗೆ ದಾಖಲುಪಡಿಸಲಾಗಿದೆ. ಹಾಗೂ ಇಬ್ಬರಿಗೆ ಪ್ರಥಮ ಚಿಕಿತ್ಸೆ ಕೊಡಲಾಗಿದೆ’ ಎಂದು ದುರಂತ ನಡೆದ ಸಂದರ್ಭ ಕಂದಾಯ ಆಯುಕ್ತರಾದ ಪವನ್ ಕುಮಾರ್ ಶರ್ಮಾ ಅವರು ಹೇಳಿದ್ದರು.
’ತುಂಬಾ ಇಕ್ಕಟ್ಟಾದ ಸ್ಥಳದಲ್ಲಿ ದೇವಸ್ಥಾನ ನಿರ್ಮಿಸಿದ್ದು, ಇಲ್ಲಿನ ಬಾವಿಯ ನೀರು ಪಂಪು ಮಾಡಿ ಮೇಲೆತ್ತಲು ಬಳಸುವ ಕೊಳವೆ ದ್ವಾರ ಒಡೆದಿದ್ದರಿಂದ ದುರ್ಘಟನೆ ಸಂಭವಿಸಿದೆ’ ಎಂಬುದು ಅಧಿಕಾರಿಗಳ ಅಭಿಪ್ರಾಯ.
’ಕಳಪೆ ಗುಣಮಟ್ಟದ ಸಿಮೆಂಟು ಹಲಗೆ ಬಳಸಿ ಬಾವಿ ಮೇಲೆ ಮೆಟ್ಟಿಲನ್ನು ನಿರ್ಮಿಸಲಾಗಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…