BREAKING NEWS

‘ದಹಿ’ ಎಂದು ಬಳಸಲು ಕೆಎಂಎಫ್‌ಗೆ ಸೂಚನೆ: ಸ್ಟಾಲಿನ್ ಕಿಡಿ

ಚೆನ್ನೈ: ಮೊಸರಿನ ಪೊಟ್ಟಣದ ಮೇಲೆ ‘ದಹಿ’ ಎಂದು ಉಲ್ಲೇಖಿಸಬೇಕಾಗಿ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್‌)ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ನೀಡಿರುವ ಸೂಚನೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಖಂಡಿಸಿದ್ದಾರೆ. ಇದಕ್ಕೆ ಕಾರಣರಾದವರನ್ನು ದಕ್ಷಿಣದಿಂದ ಹೊರಗಟ್ಟಬೇಕು ಎಂದು ಅವರು ಗುಡುಗಿದ್ದಾರೆ.

‘ದಹಿ’ ಬಳಕೆಗೆ ಸಂಬಂಧಿಸಿದಂತೆ ಎಫ್‌ಎಸ್‌ಎಸ್ಎಐನಿಂದ ಕೆಎಂಎಫ್‌ಗೆ ಬಂದಿರುವ ಸೂಚನೆ ಬಗ್ಗೆ ಹಲವು ಸುದ್ದಿ ಮಾಧ್ಯಮಗಳು ವರದಿ ಪ್ರಕಟಿಸಿದ್ದವು. ವರದಿಯನ್ನು ಸ್ಟಾಲಿನ್‌ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

‘ಅಂಕೆ ಇಲ್ಲದ ಹಿಂದಿ ಹೇರಿಕೆಯು ಮೊಸರಿನ ಪ್ಯಾಕೆಟ್‌ಗಳ ವರೆಗೆ ಬಂದಿದೆ. ನಮ್ಮದೇ ರಾಜ್ಯಗಳಲ್ಲಿ ತಮಿಳು ಮತ್ತು ಕನ್ನಡಕ್ಕೆ ಹಿನ್ನಡೆಯುಂಟು ಮಾಡುತ್ತಿದೆ. ಇದಕ್ಕೆ ಜವಾಬ್ದಾರರಾದವರನ್ನು ದಕ್ಷಿಣದಿಂದ ಶಾಶ್ವತವಾಗಿ ಹೊರಹಾಕಬೇಕು’ ಎಂದು ಅವರು ಟ್ವಿಟರ್‌ನಲ್ಲಿ ಬರೆದಿದ್ದಾರೆ. ‌

ಹಾಲಿನ ಉತ್ಪನ್ನಗಳ ಪೊಟ್ಟಣಗಳ ಮೇಲೆ ಹಿಂದಿಯಲ್ಲಿ ಉಲ್ಲೇಖವಿರಬೇಕು. ನಂತರ ಸ್ಥಳೀಯ ಭಾಷೆಯಲ್ಲಿ ಉಲ್ಲೇಖಿಸಬೇಕೆಂದು ಎಫ್‌ಎಸ್‌ಎಸ್‌ಎಐ ಇತ್ತೀಚೆಗೆ ಕೆಎಂಎಫ್‌ಗೆ ಸೂಚನೆ ನೀಡಿತ್ತು. ಇದು ಕನ್ನಡ ಹೋರಾಟಗಾರರ ಆಕ್ರೋಶಕ್ಕೂ ಕಾರಣವಾಗಿತ್ತು.

andolanait

Recent Posts

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

2 hours ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

2 hours ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

2 hours ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

2 hours ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

2 hours ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

2 hours ago