BREAKING NEWS

ಶ್ರೀಕಂಠೇಶ್ವರ ಸ್ವಾಮಿಗೆ ಅಪವಿತ್ರ ನೀರು ಎರಚಿ ಅಪಮಾನ: ನಾಳೆ ನಂಜನಗೂಡು ಬಂದ್‌!

ನಂಜನಗೂಡು: ಕಳೆದ ವಾರ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಅಂಧಕಾಸುರನ ಸಂಹಾರದ ವೇಳೆ ಕಿಡಿಗೇಡಿಗಳು ಶ್ರೀಕಂಠೇಶ್ವರ ಉತ್ಸವ ಮೂರ್ತಿಗೆ ಅಪವಿತ್ರ ನೀರು ಎರಚಿ ಅಪಚಾರ ಮಾಡಿದ ಹಿನ್ನಲೆ  ಶ್ರೀಕಂಠೇಶ್ವರ ಭಕ್ತ  ಮಂಡಳಿ ವತಿಯಿಂದ ನಾಳೆ ನಂಜನಗೂಡು ಬಂದ್‌ ಕರೆಯಲಾಗಿದೆ. ನೂರಾರು ವರ್ಷಗಳಿಂದ ಆಚರಿಸಿಕೊಂಡು ಬಂದ ಧಾರ್ಮಿಕ ಆಚರಣೆಯಾದ ಅಂಧಕಾಸುರನ ಸಂಹಾರದ ವೇಳೆ ಬುದ್ಧಿಜೀವಿಗಳು ದೇವಾಲಯದ ಆಚರಣೆಗೆ ಅಡಚಣೆ ಮಾಡುವುದಲ್ಲದೇ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪವಿತ್ರ ನೀರು ಎರಚುವ ಮೂಲಕ ಅಪಮಾನ ಮಾಡಿದ್ದರು.

ಇದನ್ನು ಖಂಡಿಸಿ ಆಚರಣೆಯಲ್ಲಿ ಭಾಗಿಯಾಗಿದ್ದ ನೂರಾರು ಭಕ್ತರು ಸ್ಥಳದಲ್ಲೇ ಕೂತು ಆಹೋರಾತ್ರಿ ಧರಣಿ ನಡೆಸಿದರು. ಘಟನೆ ನಡೆದು ಒಂದು ವಾರವಾದೂ ಇನ್ನೂ ಆರೋಪಿಗಳನ್ನು ಬಂಧಿಸದಿರುವುದನ್ನು ಖಂಡಿಸಿ ಶ್ರೀಕಂಠೇಶ್ವರ ಭಕ್ತ ಮಂಡಳಿ ನಾಳೆ ನಂಜನಗೂಡು ಬಂದ್‌ಗೆ ಕರೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಭಕ್ತ ಮಂಡಳಿಯ ಸದಸ್ಯ ಗಿರೀಶ್‌, ಡಿ.26ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ನೀಡಲಾಗಿದೆ. ಇನ್ನಾದರೂ ಪೊಲೀಸರು ಆರೋಪಿಗಳನ್ನು ಬಂಧಿಸಲು ಮುಂದಾಗಿಲ್ಲ ಎಂದು ಆರೋಪಿಸಿದರು.

ಘಟನೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸಾಖ್ಷಿ ಆಧಾರಗಳು, ವೀಡೀಯೋ ತುಣುಕಗಳನ್ನು ನೀಡಲಾಗಿದೆ. ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲು ಮುಂದಾಗದಿರುವುದು ಶ್ರೀಕಂಠೇಶ್ವರ ಸ್ವಾಮಿಯ ಸಾವಿರಾರು ಭಕ್ತರ ಭಾವನೆಗೆ ಧಕ್ಕೆ ಉಂಟಾಗಿದೆ.

ಈ ಕೂಡಲೇ ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿ ನಾಳೆ ನಂಜನಗೂಡು ಬಂದ್‌ಗೆ ಕರೆ ನೀಡಲಾಗಿದೆ. ಯಾವುದೇ ಪಕ್ಷ ಭೇದವಿಲ್ಲದೇ ನಂನಗೂಡಿನ ವರ್ತಕರ ಸಂಘ, ಆಟೋರಿಕ್ಷಾ ಚಾಲಕರ ಸಂಘ, ಕನ್ನಡ ಪರ ಸಂಘಟನೆ, ರಸ್ತೆ ಬದಿ ವ್ಯಾಪಾರಿ ಸಂಘ ಸೇರಿದಂತೆ ಅನೇಕ ಸಂಘಟನೆಗಳು ಸ್ವಯಂ ಪ್ರೇರಿತರಾಗಿ ಬಂದ್‌ಗೆ ಬೆಂಬಲ ನೀಡಿದ್ದಾರೆ ಎಂದು ಗಿರೀಶ್‌ ತಿಳಿಸಿದರು.

ಈ ಬಗ್ಗೆ ಜಿಲ್ಲಾಧಿಕಾರಿಗಳು ಕೂಡಲೆ ಆರೋಪಿಗಳನ್ನು ಬಂಧಿಸಲು ಆದೇಶ ನೀಡಿ, ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಇಲ್ಲವಾದರೇ ಈ ಹೋರಾಟ ಕೇವಲ ನಂಜನಗೂಡಿಗೇ ಸೀಮಿತಗೊಳಿಸದೇ ಜಿಲ್ಲಾಮಟ್ಟದಲ್ಲೂ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಎನ್‌.ಆರ್‌. ಕೃಷ್ಣಪ್ಪಗೌಡ, ನಗರಸಭಾ ಸದಸ್ಯ ಕಪಿಲೇಶ್‌ ಇದ್ದರು.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

10 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago