ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ 8ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ದುಕೊಂಡು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಸನ್‌ರೈಸರ್ಸ್ ಹೈದರಾಬಾದ್ ತನ್ನ ಬ್ಯಾಟ್ಸ್‌ಮನ್‌ಗಳ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 277 ರನ್ ಕಲೆಹಾಕಿ ಮುಂಬೈ ಇಂಡಿಯನ್ಸ್ ತಂಡಕ್ಕೆ 278 ರನ್‌ಗಳ ದಾಖಲೆಯ ಗುರಿಯನ್ನು ನೀಡಿತು. ಈ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ಐಪಿಎಲ್ ಇತಿಹಾಸದಲ್ಲಿ ಅತಿಹೆಚ್ಚು ರನ್ ಬಾರಿಸಿದ ತಂಡ ಎಂಬ ದಾಖಲೆ ನಿರ್ಮಿಸಿತು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ 11 ವರ್ಷಗಳ ಹಿಂದಿನ ಬೃಹತ್ ದಾಖಲೆಯನ್ನು ಮುರಿಯಿತು.
ಸನ್‌ರೈಸರ್ಸ್ ಹೈದರಾಬಾದ್: ತಂಡದ ಪರ ಮಯಾಂಕ್ ಅಗರ್ವಾಲ್ ಮತ್ತು ಟ್ರಾವಿಸ್ ಹೆಡ್ ಆರಂಭಿಕರಾಗಿ ಕಣಕ್ಕಿಳಿದರು. ಮಯಾಂಕ್ 11 (13) ರನ್‌ಗೆ ಔಟ್ ಆದರು. ಬಳಿಕ ಕಣಕ್ಕಿಳಿದ ಎಲ್ಲಾ ನಾಲ್ವರೂ ಬ್ಯಾಟ್ಸ್‌ಮನ್‌ಗಳೂ ವಿಶ್ವರೂಪ ತೋರಿದರು. ಆರಂಭದಿಂದ ಅಂತ್ಯದವರೆಗೂ ಮುಂಬೈ ಇಂಡಿಯನ್ಸ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಟ್ರಾವಿಸ್ ಹೆಡ್ 24 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 62 ರನ್ ಬಾರಿಸಿದರೆ, ಅಭಿಷೇಕ್ ಶರ್ಮಾ 23 ಎಸೆತಗಳಲ್ಲಿ 3 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ 63 ರನ್ ಬಾರಿಸಿದರು. ಏಡನ್ ಮಾರ್ಕ್ರಮ್ 28 ಎಸೆತಗಳಲ್ಲಿ ಅಜೇಯ 42 ರನ್ ಬಾರಿಸಿದರು ಮತ್ತು ಹೆನ್ರಿಕ್ ಕ್ಲಾಸೆನ್ 34 ಎಸೆತಗಳಲ್ಲಿ 4 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ ಅಜೇಯ 80 ರನ್ ಬಾರಿಸಿ ಅಬ್ಬರಿಸಿದರು.
ಮುಂಬೈ ಇಂಡಿಯನ್ಸ್ ಪರ ಜಸ್‌ಪ್ರೀತ್ ಬುಮ್ರಾ ಹೊರತುಪಡಿಸಿ ಉಳಿದೆಲ್ಲಾ ಬೌಲರ್‌ಗಳೂ 11ಕ್ಕಿಂತ ಹೆಚ್ಚಿನ ಎಕಾನಮಿಯಲ್ಲಿ ಬೌಲಿಂಗ್ ಮಾಡಿ ದುಬಾರಿಯಾದರು. ಹಾರ್ದಿಕ್ ಪಾಂಡ್ಯ, ಗೆರಾಲ್ಡ್ ಸೋಟ್ಜೆ ಹಾಗೂ ಪಿಯೂಷ್ ಚಾವ್ಲಾ ತಲಾ ಒಂದೊಂದು ವಿಕೆಟ್ ಪಡೆದರು.
ಐಪಿಎಲ್‌ನಲ್ಲಿ ಅತಿಹೆಚ್ಚು ರನ್ ದಾಖಲಿಸಿದ ತಂಡಗಳು – ಟಾಪ್ 3
1. ಸನ್‌ರೈಸರ್ಸ್ ಹೈದರಾಬಾದ್ vs ಮುಂಬೈ ಇಂಡಿಯನ್ಸ್ ( 27 ಮಾರ್ಚ್ 2024 ) – 277/3
2. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪುಣೆ ವಾರಿಯರ್ಸ್ ( 23 ಏಪ್ರಿಲ್ 2013 ) – 263/5
3. ಲಕ್ನೋ ಸೂಪರ್ ಜೈಂಟ್ಸ್ vs ಪಂಜಾಬ್ ಕಿಂಗ್ಸ್ ( 28 ಏಪ್ರಿಲ್ 2023 ) – 257/5
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…