ಪುಣೆ : ಐಪಿಎಲ್ ಕ್ರಿಕೆಟ್ ಪಂದ್ಯಗಳಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದ ಮೇಲೆ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಪುಣೆ ಪೊಲೀಸರು ಐಪಿಎಲ್ ಬೆಟ್ಟಿಂಗ್ ದಂಧೆಯನ್ನು ಭೇದಿಸಿದ್ದಾರೆ. ಮಾಹಿತಿ ಆಧರಿಸಿ ಪೊಲೀಸರು ಶನಿವಾರ ಕೊಂಡ್ವಾ ಪ್ರದೇಶದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳನ್ನು ಬಂಧಿಸಿ, 18 ಮೊಬೈಲ್ ಫೋನ್‌ಗಳು, ಮೂರು ಲ್ಯಾಪ್‌ಟಾಪ್‌ಗಳು, ಒಂದು ಕಂಪ್ಯೂಟರ್ ಹಾಗೂ ₹92,000 ನಗದು ವಶಪಡಿಸಿಕೊಂಡಿದ್ದಾರೆ.ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ವೇಳೆ ಜೂಜಾಟದ ನಡೆಸುತ್ತಿರುವ ಬಗ್ಗೆ ಅಪರಾಧ ವಿಭಾಗಕ್ಕೆ ಮಾಹಿತಿ ಸಿಕ್ಕಿತ್ತು ಎಂದು ಪೊಲೀಸರು ಹೇಳಿದ್ದಾರೆ.ಜೂಜು ತಡೆ ಕಾಯ್ದೆ ಅಡಿಯಲ್ಲಿ ಕೊಂಡ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.