ಅಹಮದಾಬಾದ್: ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಎಡ ಮೊಣಕಾಲಿಗೆ ಗಾಯವಾಗಿದ್ದು, ಶುಕ್ರವಾರ ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯಲಿರುವ ಐಪಿಎಲ್ ಆರಂಭಿಕ ಪಂದ್ಯದಲ್ಲಿ ಅವರು ಆಡುವರೇ ಎಂಬುದರ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.
ಆದರೆ, ಇಂದಿನ ಪಂದ್ಯದಲ್ಲಿ ಧೋನಿ ಇರಲಿದ್ದಾರೆ ಎಂದಿರುವ ತಂಡದ ಸಿಇಒ ಅಭಿಮಾನಿಗಳ ದುಗುಡ ದೂರ ಮಾಡುವ ಪ್ರಯತ್ನ ಮಾಡಿದ್ದಾರೆ.
41ರ ಹರೆಯದ ಭಾರತ ತಂಡದ ಮಾಜಿ ನಾಯಕ ಚೆನ್ನೈನಲ್ಲಿ ನಡೆದ ತರಬೇತಿ ವೇಳೆ ಎಡ ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಗುರುವಾರ ಮೊಟೆರಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಅಭ್ಯಾಸದಲ್ಲಿ ಅವರು ಪಾಲ್ಗೊಳ್ಳಲಿಲ್ಲ.
ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಅವರನ್ನು ಈ ಬಗ್ಗೆ ಕೇಳಿದಾಗ, ‘ನನ್ನ ಮಟ್ಟಿಗೆ, ಧೋನಿ ಆಡುವುದು ಶೇ 100 ರಷ್ಟು ಖಚಿತ. ಬೇರೆ ಯಾವುದೇ ಬೆಳವಣಿಗೆಯ ಬಗ್ಗೆ ನನಗೆ ತಿಳಿದಿಲ್ಲ’ ಎಂದು ಹೇಳಿದರು.
ಒಂದು ವೇಳೆ ಧೋನಿ ಆಡದಿದ್ದಲ್ಲಿ, ಡೆವೊನ್ ಕಾನ್ವೇ ಅಥವಾ ಅಂಬಟಿ ರಾಯುಡು ಅವರಲ್ಲಿ ಒಬ್ಬರು ವಿಕೆಟ್ ಕೀಪರ್ ಆಗಬಹುದು.
ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ…
ನಮ್ಮ ಸಂವಿಧಾನಕ್ಕೆ ಬರೋಬ್ಬರಿ 75ವರ್ಷಗಳು ತುಂಬಿವೆ. ಭಾರತದ ಪ್ರಜೆಗಳಾದ ನಮಗೆ ಸಂವಿಧಾನವೇ ‘ಸಾಮಾಜಿಕ ನ್ಯಾಯದ ತಾಯಿ’. ಸರ್ವಜನಾಂಗದ ಹಿತರಕ್ಷಣೆಯ ಹೊಣೆಹೊತ್ತ…
ಭವಿಷ್ಯದ ಗುರಿಸಾಧನೆಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ನಿರ್ಧಾರ ಕಳೆದ ವಾರ ಬಿಜೆಪಿ-ಜಾ.ದಳ ಪಾಳೆಯಗಳಲ್ಲಿ ದೊಡ್ಡ ಮಟ್ಟದ ಸಂಚಲನ…
2025ರ ವರ್ಷಾಂತ್ಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಘೋರ ದುರಂತಕ್ಕೆ ಸಾಕ್ಷಿಯಾದದ್ದು ಅತ್ಯಂತ ವಿಷಾದಕರ ಮತ್ತು ಆತಂಕಕಾರಿ ಸಂಗತಿ. ಹೊಟ್ಟೆ ಪಾಡಿಗಾಗಿ…
ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು 2025ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ…
* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…