ನಟ ಇರ್ಫಾನ್ ಖಾನ್ ಇನ್ನಿಲ್ಲ

ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ನಟ ಇರ್ಫಾನ್ ಖಾನ್ ನಿಧನರಾಗಿದ್ದಾರೆ.

ಇತ್ತೀಚೆಗೆ ಬಾಲಿವುಡ್‌ ನಟ ಇರ್ಫಾನ್‌ ಖಾನ್‌ ಅವರು ಕೊಲೊನ್ ಇನ್‌ಫೆಕ್ಷನ್‌ನಿಂದಾಗಿ ಕೋಕಿಲಬೆನ್‌ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಗಾ ಘಟಕದಲ್ಲಿದ್ದು, ವೈದ್ಯರು ಪರೀಕ್ಷೆ ನಡೆಸುತ್ತಿದ್ದರು ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು 54ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಇರ್ಫಾನ್ ಖಾನ್ ನ್ಯೂರೋ ಎಂಡೊಕ್ರೈನ್ ಟ್ಯೂಮರ್ ಎಂಬ ಕ್ಯಾನ್ಸರ್‌ನಿಂದ ಬಳಲುತ್ತಿದ್ದುದಾಗಿ ಅವರೇ 2018ರಲ್ಲಿ ಅವರೇ ಮಾಹಿತಿ ನೀಡಿದ್ದರು. ಈ ಅಪರೂಪದ ಕಾಯಿಲೆಗೆ ಚಿಕಿತ್ಸೆ ಪಡೆಯಲು ಅವರು ವಿದೇಶಕ್ಕೂ ಕೂಡ ಹೋಗಿದ್ದರು. ಹೀಗಾಗಿ ಸುಮಾರು ಒಂದು ವರ್ಷದಿಂದ ಸಿನಿಮಾಗಾಗಿ ಬಣ್ಣ ಹಚ್ಚಿರಲಿಲ್ಲ. ಆಮೇಲೆ ಲಂಡನ್‌ನಲ್ಲಿ‌ ಚಿಕಿತ್ಸೆ ಪಡೆದು ಪುನಃ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದರು.

ಪಿಲ್ಲೋ ಚಾಲೆಂಜ್ ಆಯ್ತು. ಈಗ ? 

ಆಂದೋಲನ ಈ-ಪೇಪರ್ ಓದಲು ಇಲ್ಲಿ ಕ್ಲಿಕ್ ಮಾಡಿ 

[cvct title="Coronavirus Stats"  country-code="IN" label-total="Total Cases" label-deaths="Death Cases" label-recovered="Recovered Cases"  bg-color="#23282D" font-color="#fff"]

One thought on “ನಟ ಇರ್ಫಾನ್ ಖಾನ್ ಇನ್ನಿಲ್ಲ

Comments are closed.

× Chat with us