BREAKING NEWS

ಡೆಡ್ಲಿ ಆಕ್ಸಿಡೆಂಟ್ ಸ್ಪಾಟ್ ಆಗುತ್ತಿದೆಯೇ ಬೆಂ-ಮೈ ದಶಪಥ ಹೆದ್ದಾರಿ ?

ಮಂಡ್ಯ : ಉದ್ಯಾನ ನಗರಿ ಮತ್ತು ಸಾಂಸ್ಕೃತಿಕ ನಗರಿ ಬೆಸೆಯುವ ಬಹುಕೋಟಿ ರೂಪಾಯಿ ವೆಚ್ಚದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಡೆಡ್ಲಿ ಆಕ್ಸಿಡೆಂಟ್ ಜೋನ್ ಆಗುತ್ತಿದೆಯೆ ಎಂಬ ಅನುಮಾನ ಮೂಡುತ್ತಿದೆ. ಹೆದ್ದಾರಿ ಉದ್ಘಾಟನೆಯಾದ ಬಳಿಕ ಇಲ್ಲಿ ಆಗುತ್ತಿರುವ ಅಪಘಾತಗಳ ಇಂತದ್ದೊಂದು ಶಂಕೆ ಹುಟ್ಟುಹಾಕಿದೆ.

ಬೆಂಗಳೂರು ಹಾಗೂ ಸುತ್ತಮುತ್ತ ಕೈಗಾರಿಕೆಗಳು ಹೆಚ್ಚಿವೆ. ಇದೇ ರೀತಿ ಮೈಸೂರು ನಗರವು ಅಭಿವೃದ್ಧಿಯಾಗಲಿದೆ. ಎರಡು ಪ್ರಮುಖ ನಗರಗಳ ಮಧ್ಯೆ ಪ್ರಯಾಣಿಕರ ಸುಗಮ ಮತ್ತು ಸುಲಭ ಕ್ಷಿಪ್ರ ಓಡಾಟಕ್ಕೆ ಅನುಕೂಲವಾಗಲೆಂದು ಎಕ್ಸ್‌ಪ್ರೆಸ್‌ ವೇ ನಿರ್ಮಾಣ ಮಾಡಲಾಗಿದೆ. ಒಟ್ಟು ಸುಮಾರು 9000 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ಸರ್ಕಾರ ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣವಾಗಿದೆ. ಉದ್ಘಾಟನೆಗೊಂಡ ಬಳಿಕ ಕೇವಲ 5 ತಿಂಗಳಲ್ಲೇ ಇದುವರೆಗೆ ಹಲವು ಅಪಘಾತಗಳಲ್ಲಿ 50ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದು ಮಂಡ್ಯ ಹಾಗೂ ವಿವಿಧ ಗ್ರಾಮಗಳ ಜನರಲ್ಲಿ ಆತಂಕ ಮೂಡಿಸಿದೆ.

ಆಗಾಗ ಸಂಭವಿಸುತ್ತಿರುವ ಅಪಘಾತಗಳಿಂದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಮಂಡ್ಯ ಜಿಲ್ಲೆಯೊಳಗೆ ಹಾದು ಹೋಗುತ್ತದೆ. ಜಿಲ್ಲೆ ವ್ಯಾಪ್ತಿಯಲ್ಲಿ ಬರೋಬ್ಬರಿ 55 ಕಿ.ಮೀಗೂ ಹೆಚ್ಚು ದಶಪಥ ಹೆದ್ದಾರಿ ಇದೆ. ಈ ಹೆದ್ದಾರಿಯ ಕಾಮಗಾರಿ ಪೂರ್ಣಗೊಂಡಿದ್ದು, ವೇಗದ ಈ ಪ್ರಯಾಣವು ಪ್ರಯಾಣದ ಸಮಯವನ್ನು ಉಳಿಸುತ್ತಿದೆ.

ಇದುವರೆಗಿನ ಅಪಘಾತಗಳ ಸಂಪೂರ್ಣ ಮಾಹಿತಿ : ಮಂಡ್ಯ ವ್ಯಾಪ್ತಿಯ ಈ ಹೆದ್ದಾರಿಯಲ್ಲಿ ನಡೆದ ಅಪಘಾತ ಪ್ರಕರಣ ಹಾಗೂ ಸಾವಿನ ವರದಿಗೆ ಮಂಡ್ಯ ಜನ ಕಳವಳ ವ್ಯಕ್ತಪಡಿಸಿದ್ದಾರೆ. ಜನವರಿ ತಿಂಗಳಿಂದ ಮೇ ತಿಂಗಳಾಂತ್ಯದವರೆಗೆ 570 ಅಪಘಾತ ಪ್ರಕರಣ ಸಂಭವಿಸಿವೆ. ಅದರಲ್ಲಿ 50ಕ್ಕೂ ಹೆಚ್ಚು ಮಂದಿಗೆ ಸಾವಿಗೀಡಾಗಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡರೆ, 180ಕ್ಕೂ ಅಧಿಕ ಮಂದಿ ಕೈಕಾಲು ಮುರಿದಕೊಂಡಿದ್ದಾರೆ. 279 ಜನರಿಗೆ ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳಾಗಿವೆ. ಸಾವುಗಳು ಕೂಡ ಸಂಭವಿಸಿವೆ.

ಹೆದ್ದಾರಿಯು ಉಪಯೋಗವಿದ್ದರೂ ಸಹ ವೇಗದ ಚಾಲನೆಯಿಂದಾಗಿ ದುರಂತಗಳು ಸಂಭವಿಸುತ್ತಿವೆ. ಎಕ್ಸ್‌ಪ್ರೆಸ್ ವೇ ಸೇರಿದಂತೆ ಇಲ್ಲಿನ ಸರ್ವಿಸ್ ರಸ್ತೆಯಲ್ಲಿ ವೇಗವಾಗಿ ವಾಹನಗಳು ಸಂಚಾರ ನಡೆಸುತ್ತವೆ. ಈ ವೇಳೆ ಚಾಲಕರ ನಿಯಂತ್ರಣ ತಪ್ಪಿಯು ಅವಘಡಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ. ಇದರೊಂದಿಗೆ ಮತ್ತೊಂದೆಡೆ ಸಣ್ಣಪುಟ್ಟ ಕಾಮಗಾರಿಗಳು ನಡೆಯುತ್ತಿವೆ. ಅದು ಸಹ ಅವಘಡಗಳಿಗೆ ಕಾರಣವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. ರಸ್ತೆಗಳಲ್ಲಿ ಉಬ್ಬುಗಳಿಂದ ಹಾಗೂ ಇನ್ನಿತರ ಕಾರಣಗಳಿಂದ ವೇಗವಾಗಿ ಚಲಿಸುತ್ತಿರುವ ವಾಹನಗಳು ಒಮ್ಮೇಲೆ ನಿಯಂತ್ರಿಸಲಾಗದೇ ಅಪಘಾತ ಸಂಭವಿಸಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

lokesh

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

12 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

14 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

16 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

16 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

22 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

22 hours ago