BREAKING NEWS

ಪ್ರತಾಪ್‌ ಸಿಂಹ ಅವರೇ ಕನಿಷ್ಠ ಪರಿಜ್ಞಾನವೂ ಇಲ್ಲವೇ? ನಿಮ್ಮ ಬಾಯಿ ಚಪಲ ಸ್ವಲ್ಪ ಕಡಿಮೆ ಮಾಡಿಕೊಳ್ಳಿ – ಶಾಸಕ ಪ್ರದೀಪ್‌ ಈಶ್ವರ್‌

ಬೆಂಗಳೂರು : ಮೈಸೂರು ಸಂಸದರಾದ ಪ್ರತಾಪ್‌ ಸಿಂಹ ಅವರೇ ನಿಮ್ಮ ಬಾಯಿ ಚಪಲ ಸ್ವಲ್ಪ ಕಡಿಮೆ ಮಾಡಿಕೊಳ್ಳಿ. ನಾಲ್ಕು ದಿನಕ್ಕೆ ದೊಡ್ಡ ಯೋಜನೆಗಳನ್ನು ಜಾರಿಮಾಡಬೇಕು ಎಂದು ಕೇಳುತ್ತಿದ್ದೀರಾ? ನಿಮಗೆ ಕನಿಷ್ಠ ಪರಿಜ್ಞಾನವೂ ಇಲ್ಲವೇ ? ಎಂದು ಶಾಸಕ ಪ್ರದೀಪ್‌ ಈಶ್ವರ್‌ ಕಿಡಿಕಾರಿದ್ದಾರೆ.

ಶನಿವಾರ ರಾಜಭವನದಲ್ಲಿ ನಡೆದ ರಾಜ್ಯ ಸರ್ಕಾರದ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕ ಪ್ರದೀಪ್‌ ಈಶ್ವರ್‌ ಅವರು ಗ್ಯಾರಂಟಿ ಯೋಜನೆಗಳ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ಸಂದರ್ಭದಲ್ಲಿ ಪ್ರತಾಪ್‌ ಸಿಂಹ ಅವರ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದರು.

ಕನಿಷ್ಠ ಪರಿಜ್ಞಾನವೂ ಇಲ್ಲವೇ? : ಒಂದು ಸರ್ಕಾರ ಈಗ ತಾನೆಯೇ ಅಧಿಕಾರಕ್ಕೆ ಬಂದಿದೆ. ಆ ಸರ್ಕಾರದ ಸಚಿವ ಸಂಪುಟ ಈಗ ಸಿದ್ಧವಾಗುತ್ತಿದೆ. ಯಾವುದೇ ಯೋಜನೆ ಜಾರಿಗೊಳಿಸಬೇಕು ಎಂದರೂ ಸಚಿವ ಸಂಪುಟ ಅನುಮೋದನೆ ಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಜಾರಿಗೆ ತಂದೇ ತರುತ್ತೇವೆ ಎಂದಿದ್ದಾರೆ. ಆದರೆ, ನಾಲ್ಕು ದಿನಕ್ಕೆ ಜಾರಿ ಮಾಡಬೇಕು ಎಂದು ಕೇಳುತ್ತಿರುವ ಚುನಾಯಿತ ಸದಸ್ಯರಾಗಿರುವ ಮೈಸೂರು ಸಂಸದರಾದ ಪ್ರತಾಪ್‌ ಸಿಂಹ ಅವರಿಗೆ ಕನಿಷ್ಠ ಪರಿಜ್ಞಾನವೂ ಇಲ್ಲವೇ? “ಎಂದು ಪ್ರಶ್ನಿಸಿದರು.

ಬಾಯಿ ಚಪಲ ಕಡಿಮೆ ಮಾಡಿಕೊಳ್ಳಿ : ನಿಮ್ಮ ಬಾಯಿ ಚಪಲ ಸ್ವಲ್ಪ ಕಡಿಮೆ ಮಾಡಿಕೊಳ್ಳಿ ಪ್ರತಾಪ್‌ ಸಿಂಹ ಅವರೇ. ಸ್ಪಲ್ಪ ಸಮಯ ಬೇಕಿದೆ. ವಿರೋಧ ಪಕ್ಷವಾಗಿ ಏನೋ ಮಾತನಾಡಬೇಕು ಎಂದು ಮಾತನಾಡಬಾರದು. ಸಿದ್ದರಾಮಯ್ಯ ಅವರನ್ನು ಬೈದರೇ ಇವರು ಪ್ಯಾಪುರಲ್‌ ಆಗಿಬಿಡುತ್ತಾರೆ. ಹೀಗಾಗಿಯೇ, ಅದನ್ನು ಬಿಟ್ಟು ಇವರಿಗೆ ಏನು ಕೆಲಸ ಇಲ್ಲ ಎಂದು ಕಿಡಿಕಾರಿದರು.

lokesh

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

5 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

6 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

7 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

7 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

7 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

11 hours ago