ಜೆರುಸಲೇಂ: ಹಮಾಸ್ ಉಗ್ರರನ್ನು ನಿರ್ನಾಮ ಮಾಡಲು ಪಣತೊಟ್ಟಿರುವ ಇಸ್ರೇಲ್, ಗಾಜಾ ಪಟ್ಟಿ ಮೇಲೆ ನಡೆಸುತ್ತಿರುವ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಮಂಗಳವಾರ ತಡರಾತ್ರಿ ಗಾಜಾ ನಗರದ ಮೇಲೆ ಇಸ್ರೇಲ್ ರಾಕೆಟ್ ದಾಳಿ ನಡೆಸಿದ್ದು, ಕಳೆದ 24 ಗಂಟೆಗಳಲ್ಲಿ 700ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆಂದು ಹಮಾಸ್ ಉಗ್ರರೇ ಮಾಹಿತಿ ನೀಡಿದ್ದಾರೆ.
ಇಸ್ರೇಲ್ ಹಾಗೂ ಹಮಾಸ್ ಉಗ್ರರ ಸಮರ ಆರಂಭವಾದ ಬಳಿಕ ಇಸ್ರೇಲ್ ನಡೆಸಿದ ಭೀಕರ ದಾಳಿ ಇದಾಗಿದೆ ಎಂದು ತಿಳಿದುಬಂದಿದೆ.
ಹಮಾಸ್‌ನ 400 ಪ್ರಮುಖ ಉಗ್ರರನ್ನು ಗುರಿಯಾಗಿಸಿ ಇಸ್ರೇಲ್ ರಾತ್ರೋರಾತ್ರಿ ಗಾಜಾ ನಗರದ ಮೇಲೆ ದಾಳಿ ನಡೆಸಿದೆ. ಆದರೆ, ದಾಳಿಯಲ್ಲಿ 700ಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ ಹಮಾಸ್ ಹೇಳಿಕೊಂಡಿದೆ.
ದಾಳಿಯಲ್ಲಿ ಸಾವಿರಾರು ಜನರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲು ಕೂಡ ಆಗುತ್ತಿಲ್ಲ ಎಂದು ತಿಳಿಸಿದೆ.
ಈ ನಡುವೆ ಇಸ್ರೇಲ್ ಹಾಗೂ ಹಮಾಸ್ ಉಗ್ರರ ನಡುವಿನ ಯುದ್ಧ ಆರಂಭವಾಗಿ ಇಂದಿಗೆ 20 ದಿನಗಳು ಕಳೆದಿದ್ದು, ದಾಳಿಯಲ್ಲಿ ಇದುವರೆಗೆ ಇದುವರೆಗೆ 7,100 ಜನ ಮೃತಪಟ್ಟಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.
ಇಸ್ರೇಲ್ ಮೇಲೆ ಹಮಾಸ್ ಮಾಡಿದ ದಾಳಿಯಿಂದ ಇದುವರೆಗೆ 1,400 ಮಂದಿ ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಗಾಜಾ ನಗರದಲ್ಲಿ ಇಸ್ರೇಲ್ ಸತತ ದಾಳಿಗೆ 5,700ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಜಾ ನಗರದಲ್ಲಂತೂ ಸಾವಿರಾರು ಜನ ಗಾಯಗೊಂಡಿದ್ದು, ಲಕ್ಷಾಂತರ ನಾಗರಿಕರು ನಿರಾಶ್ರಿತರಾಗಿದ್ದಾರೆ,
ಈ ನಡುವೆ ಗಾಜಾ ಗಡಿಯಲ್ಲಿ ಸಾವಿರಾರು ಸೈನಿಕರು, ನೂರಾರು ಯುದ್ಧ ಟ್ಯಾಂಕರ್‌ಗಳನ್ನು ನಿಯೋಜಿಸಿರುವ ಇಸ್ರೇಲ್, ಪೂರ್ಣ ಪ್ರಮಾಣದ ದಾಳಿ ನಡೆಸಲು ಇಸ್ರೇಲ್ ಸಜ್ಜಾಗಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಇಸ್ರೇಲ್ ಸೈನಿಕರು ಗಾಜಾ ನಗರದ ಮೇಲೆ ಪೂರ್ಣ ಪ್ರಮಾಣದ ದಾಳಿ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಇದರ ಭೀತಿಯಿಂದಾಗಿಯೇ ಹಮಾಸ್ ಉಗ್ರರು ಇಸ್ರೇಲ್‌ನ ಇಬ್ಬರು ಒತ್ತೆಯಾಳುಗಳನ್ನು ಸೋಮವಾರ ಬಿಡುಗಡೆ ಮಾಡಿದ್ದರು. ಇಷ್ಟಾದರೂ ಕೆಲವು ಉಗ್ರರು ರಕ್ಕಸ ಕೃತ್ಯಗಳ ಮೂಲಕ ನಾಗರಿಕರನ್ನು ಹಿಂಸಿಸುತ್ತಿದ್ದಾರೆಂದು ಹೇಳಲಾಗುತ್ತಿದೆ.
ಅಮೆರಿಕಾ ಕಳವಳ
ಏತನ್ಮಧ್ಯೆ ಇಸ್ರೇಲ್ ಹಾಗೂ ಹಮಾಸ್ ನಡುವಿನ ನಿಲ್ಲದ ಯುದ್ಧದ ಬಗ್ಗೆ ವಿಶ್ವದ ದೊಡ್ಡಣ್ಣ ಅಮೆರಿಕಾ ಕಳವಳ ವ್ಯಕ್ತಪಡಿಸಿದೆ.
ನಿರಂತರವಾಗಿ ನಡೆಯುತ್ತಿರುವ ಬಾಂಬ್ ದಾಳಿಗಳಿಂದ ಗಾಜಾದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಯುದ್ಧ ಆ ಪ್ರದೇಶದಲ್ಲಿ ವ್ಯಾಪಕ ಸಂಘರ್ಷವನ್ನು ಉಂಟು ಮಾಡಬಹುದು ಎಂದು ಹೇಳಿದೆ.
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…
ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು;…
ಬೆಂಗಳೂರು: ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ರೂ. ಮೊತ್ತದ 10 ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ…