BREAKING NEWS

ಇಸ್ರೇಲ್- ಹಮಾಸ್ ಯುದ್ಧ: ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ರಾಜ್ಯದ ಮುಖ್ಯಮಂತ್ರಿ ಕಾರ್ಯಾಲಯ ಮನವಿ

ಬೆಂಗಳೂರು : ಇಸ್ರೇಲ್-ಹಮಾಸ್ ಯುದ್ಧವು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಕರ್ನಾಟಕ ಮುಖ್ಯಮಂತ್ರಿ ಕಾರ್ಯಾಲಯ ವಿನಂತಿಸಿದೆ.

“ಇಸ್ರೇಲ್‌ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಸ್ಥಳೀಯ  ಅಧಿಕಾರಿಗಳ ಸೂಚನೆಗಳು ಮತ್ತು ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ವಿನಂತಿಸಲಾಗಿದೆ.  ದಯವಿಟ್ಟು ಹೆಚ್ಚಿನ ಜಾಗರೂಕತೆಯನ್ನು ವಹಿಸುತ್ತಾ, ಅನಗತ್ಯ ಪ್ರಯಾಣಗಳನ್ನು ತಪ್ಪಿಸಿ ಮತ್ತು ಸುರಕ್ಷತಾ ಆಶ್ರಯಗಳ ಹತ್ತಿರ ಇರಬೇಕಾಗಿ ಮನವಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಸ್ರೇಲಿ ಹೋಮ್ ಫ್ರಂಟ್ ಕಮಾಂಡ್ ವೆಬ್‌ಸೈಟ್ https:// www.org.il/en  ಅಥವಾ ಅವರ ಸಿದ್ಧತೆ ಕರಪತ್ರವನ್ನು ನೋಡಿ. ತುರ್ತು ಸಂದರ್ಭದಲ್ಲಿ ಮೊಬೈಲ್ ನಂಬರ್ 97235226748 ಸಂಪರ್ಕಿಸಿ ಅಥವಾ consl. telaviv@mea.gov.in ನಲ್ಲಿ ಇ- ಮೇಲ್ ಸಂದೇಶ ಕಳುಹಿಸಿ, ಯಾವುದೇ ಹೆಚ್ಚಿನ ಮಾರ್ಗದರ್ಶನಕ್ಕಾಗಿ ರಾಯಭಾರ ಕಚೇರಿಯ ಸಿಬ್ಬಂದಿಯನ್ನು ಸಂಪರ್ಕಿಸಿ ಎಂದು ತಿಳಿಸಲಾಗಿದೆ.

ಇಸ್ರೇಲ್‌ನಲ್ಲಿರುವ ತನ್ನ ನಾಗರಿಕರ ಸುರಕ್ಷತೆಗಾಗಿ ವಿದೇಶಾಂಗ ವ್ಯವಹಾರಗಳ ಸಚಿವರೊಂದಿಗೆ ನಿಕಟವಾಗಿ ಕಾರ್ಯ ನಿರ್ವಹಿಸುತ್ತಿರುವುದಾಗಿ ಸಿಎಂ ಕಚೇರಿ ಎಕ್ಸ್ ಖಾತೆಯಲ್ಲಿ ವಿವರಿಸಲಾಗಿದೆ.

https://x.com/CMofKarnataka/status/1710940682607902750?s=20

andolanait

Recent Posts

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

38 mins ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

40 mins ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

41 mins ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

43 mins ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

51 mins ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

55 mins ago