BREAKING NEWS

ಹೃದಯಾಘಾತದಿಂದ ಇಸ್ರೋ ವಿಜ್ಞಾನಿ ವಲರ್ಮತಿ ನಿಧನ

ನವದೆಹಲಿ : ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆಯ ಸಂದರ್ಭದಲ್ಲಿ ಕೌಂಟ್‌ಡೌನ್‌ಗೆ ಧ್ವನಿ ನೀಡುತ್ತಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಜ್ಞಾನಿ ವಲರ್ಮತಿ ಅವರು ಹೃದಯಾಘಾತದಿಂದ ಭಾನುವಾರ ನಿಧನರಾಗಿದ್ದಾರೆ.

ಚಂದ್ರಯಾನ-3 ರಾಕೆಟ್ ಉಡಾವಣೆಯ ಸಂದರ್ಭದಲ್ಲೂ ಸಹಾ ಕೌಂಟ್‌ಡೌನ್‌ಗೆ ಇವರು ಧ್ವನಿ ನೀಡಿದ್ದು, ಇಸ್ರೋದಲ್ಲಿ ಅದು ಅವರ ಕೊನೆಯ ಧ್ವನಿಯಾಗಿತ್ತು.

ಅವರ ನಿಧನಕ್ಕೆ ಇಸ್ರೋದ ಮಾಜಿ ನಿರ್ದೇಶಕರಾದ ಡಾ.ಪಿ.ವಿ.ವೆಂಕಟಕೃಷ್ಣನ್ ಟ್ವಿಟ್ಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಮಿಷನ್‌ಗಳ ಕೌಂಟ್‌ಡೌನ್‌ಗಳಿಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ-3 ಆಕೆಯ ಅಂತಿಮ ಕೌಂಟ್‌ಡೌನ್ ಘೋಷಣೆಯಾಗಿತ್ತು. ಅವರು ಅನಿರೀಕ್ಷಿತವಾಗಿ ನಿಧನರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಲರ್ಮತಿ ಆರ್‌ಐಎಸ್‌ಎಟಿ-1ರ ಪಾಜೆಕ್ಟ್ ಡೈರೆಕ್ಟರ್ ಆಗಿದ್ದು, 2015ರಲ್ಲಿ ಸರ್ಕಾರ ನೀಡಿದ ಅಬ್ದುಲ್ ಕಲಾಂ ಪ್ರಶಸ್ತಿಗೆ ಭಾಜನರಾಗಿದ್ದರು. ವಲರ್ಮತಿ 1984ರಲ್ಲಿ ಇಸ್ರೋಗೆ ಸೇರಿದ್ದು, ಇನ್ಸಾಟ್ 2ಎ, ಐಆರ್‌ಎಸ್, ಐಸಿ, ಐಡಿ, ಟಿಇಎಸ್ ಸೇರಿದಂತೆ ಹಲವು ಕಾರ್ಯಾಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

lokesh

Recent Posts

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

25 mins ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

1 hour ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

1 hour ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

1 hour ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

5 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

10 hours ago