BREAKING NEWS

ಆಗಸ್ಟ್ 23 ಸಂಜೆ 6:04 ಕ್ಕೆ ಚಂದ್ರನ ಮೇಲೆ ಇಳಿಯಲಿದೆ ಇಸ್ರೋ ನೌಕೆ

ಶ್ರೀಹರಿಕೋಟಾ : ಚಂದ್ರಯಾನ–3ರ ಎರಡನೆಯ ಮತ್ತು ಕೊನೆಯ ಡಿ– ಬೂಸ್ಟಿಂಗ್‌ ಕಾರ್ಯ ಇಂದು ಬೆಳಿಗ್ಗೆ ಯಶಸ್ವಿಯಾಗಿ ಪೂರ್ಣಗೊಂಡ ಬೆನ್ನಲ್ಲೇ ಚಂದ್ರಯಾನ 3 ನೌಕೆಯ ಚಂದ್ರನ ಮೇಲ್ಮೈ ಮೇಲೆ ಲ್ಯಾಂಡಿಂಗ್ ಆಗುವ ದಿನಾಂಕ ಘೋಷಣೆ ಮಾಡಿದೆ.

ನೌಕೆಯು ಚಂದ್ರನ ಅಂತಿಮ ಕಕ್ಷೆಯನ್ನು ತಲುಪಿದ್ದು, ದಕ್ಷಿಣ ದ್ರುವದಲ್ಲಿ ಲ್ಯಾಂಡ್‌ ಆಗಬೇಕಿದೆ. ಇದಕ್ಕೆ ಇದೀಗ ಇಸ್ರೋ ಮುಹೂರ್ತ ನಿಗದಿಪಡಿಸಿದ್ದು, ಆಗಸ್ಟ್ 23 ಬುಧವಾರ ಸಂಜೆ 6:04 ಕ್ಕೆ ನೌಕೆ ಚಂದ್ರನ ಮೇಲೆ ಲ್ಯಾಂಡ್ ಆಗಲಿದೆ.

ಪ್ರಸ್ತುತ ವಿಕ್ರಮ್ ಲ್ಯಾಂಡರ್ ಚಂದ್ರನಿಗೆ ಅತ್ಯಂತ ಸಮೀಪವಿರುವ ಬಿಂದು 25 ಕಿಮೀ ಮತ್ತು ಚಂದ್ರನಿಂದ 134 ಕಿಮೀ ದೂರದ ಕಕ್ಷೆಯನ್ನು ತಲುಪಿದೆ. ಈ ಕಕ್ಷೆಯಿಂದಲೇ ದಕ್ಷಿಣ ಧ್ರುವ ಪ್ರದೇಶದಲ್ಲಿ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನಿಸುತ್ತದೆ ಎಂದು ಇಸ್ರೊ ಹೇಳಿದೆ.

ಎರಡನೇ ಮತ್ತು ಅಂತಿಮ ಡಿ–ಬೂಸ್ಟಿಂಗ್ ಕಾರ್ಯಾಚರಣೆಯು ಚಂದ್ರನ ಕಕ್ಷೆಯನ್ನು 25 km x 134 km ನಷ್ಟು ಸನಿಹಕ್ಕೆ ತಲುಪಿದೆ. ಮಾಡ್ಯೂಲ್ ಆಂತರಿಕ ತಪಾಸಣೆಗೆ ಒಳಗಾಗುತ್ತದೆ ಮತ್ತು ನಿರ್ದಿಷ್ಟಪಡಿಸಿದ ಲ್ಯಾಂಡಿಂಗ್ ಸೈಟ್‌ನಲ್ಲಿ ಸೂರ್ಯೋದಯಕ್ಕಾಗಿ ಕಾಯುತ್ತಿದೆ. ಚಂದ್ರನ ಮೇಲೆ ಇಳಿಯುವ ಪ್ರಕ್ರಿಯೆಯು ಆಗಸ್ಟ್ 23, 2023 ರಂದು ಬೆಳಿಗ್ಗೆ ಸ್ಥಳೀಯ ಕಾಲಮಾನ 17.45 ಗಂಟೆಗಳಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಲ್ಯಾಂಡರ್ ವಿಕ್ರಮ್ ಸ್ವಯಂಚಾಲಿತ ಕ್ರಮದಲ್ಲಿ ಚಂದ್ರನ ಕಕ್ಷೆಯಲ್ಲಿ ಇಳಿಯುತ್ತಿದೆ; ಹೇಗೆ ಹೋಗಬೇಕೆಂದು ಅದು ತಾನಾಗಿಯೇ ನಿರ್ಧರಿಸುತ್ತದೆ ಎಂದು ಇಸ್ರೊ ಟ್ವಿಟರ್ ನಲ್ಲಿ ತಿಳಿಸಿದೆ.

25 ಕಿಲೋ ಮೀಟರ್ x 134 ಕಿಲೋ ಮೀಟರ್ ಕಕ್ಷೆ ಚಂದ್ರನ ಸಮೀಪದ ಕಕ್ಷೆಯಾಗಿದ್ದು ಚಂದ್ರನ ಮೇಲೆ ಇಳಿಯುವ ಪ್ರಕ್ರಿಯೆ ಆಗಸ್ಟ್ 23ರಂದು ನಡೆಯಲಿದೆ. ಹೀಗಾಗಿ ಇಡೀ ಜಗತ್ತು ಭಾರತದ ಕಡೆ ಕಣ್ಣಿಟ್ಟು ಕಾಯುತ್ತಿದೆ.

ಈ ಬಾರಿ ಇಸ್ರೋ ಅಂತ್ಯಾಧುನಿಕ ತಂತ್ರಜ್ಞಾನ ಬಳಸಿ ಚಂದ್ರನ ಯೋಜನೆಗೆ ಸಿದ್ಧತೆ ನಡೆಸಿತ್ತು. ಹೀಗಾಗಿ ಚಂದ್ರಯಾನ-3 ಲ್ಯಾಂಡರ್ ಹೈಫೈ ಆಗಿದೆ. ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ ಕೂಡ ಅತ್ಯಾಧುನಿಕ ತಂತ್ರಜ್ಞಾನವೇ ಆಗಿದೆ. ಇದು ವಿಕ್ರಮ್ ಲ್ಯಾಂಡರ್ ತನಗಾಗಿ ಸರಿಯಾದ ಮತ್ತು ಸಮತಟ್ಟು ಲ್ಯಾಂಡಿಂಗ್ ಸ್ಥಳ ಹುಡುಕಲು ಸಹಾಯ ಮಾಡುತ್ತದೆ. ಕ್ಯಾಮೆರಾದ ಸಹಾಯದಿಂದ ವಿಕ್ರಮ್ ಲ್ಯಾಂಡರ್ ಎಲ್ಲಿ ಇಳಿಯುತ್ತಿದೆ? ಹೇಗೆ ಇಳಿಯುತ್ತಿದೆ? ಎಂಬುದನ್ನು ನೋಡಬಹುದು.

lokesh

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago