ಕಳೆದ ವರ್ಷ ಯಶಸ್ವಿಯಾಗಿ ಚಂದ್ರಯಾನ ಮಾಡಿ ಐತಿಹಾಸಿಕ ಸಾಧನೆ ಮಾಡಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸದ್ಯ ಆದಿತ್ಯ ಎಲ್1 ಬಾಹ್ಯ ನೌಕೆಯನ್ನು ಉಡಾವಣೆ ಮಾಡಿ ಸೂರ್ಯನನ್ನು ಅಧ್ಯಯನ ಮಾಡಲು ಮುಂದಾಗಿತ್ತು.
ಶ್ರೀಹರಿಕೋಟಾದಿಂದ ಉಡಾವಣೆಯಾಗಿದ್ದ ಆದಿತ್ಯ – ಎಲ್ 1 ನಾಲ್ಕು ತಿಂಗಳ ಬಳಿಕ ಇಂದು ( ಜನವರಿ 6 ) ಯಶಸ್ವಿಯಾಗಿ ಅಂತಿಮ ಕಕ್ಷೆಯನ್ನು ತಲುಪಿದೆ. ಆದಿತ್ಯ ಎಲ್ 1 ಗಮ್ಯಸ್ಥಾನ ತಲುಪುತ್ತಿದ್ದಂತೆಯೇ ಇಸ್ರೋ ಟ್ವೀಟ್ ಮಾಡಿದ್ದು “ಭಾರತ, ನಾನು ತಲುಪಿದೆ. ನಾನು ನನ್ನ ಗಮ್ಯಸ್ಥಾನವನ್ನು ತಲುಪಿದೆ” ಎಂದು ಬರೆದುಕೊಂಡಿದೆ. ಆದಿತ್ಯ ಎಲ್ 1 ಯಶಸ್ವಿಯಾಗಿ ಎಲ್ 1 ಬಿಂದುವಿನ ಹಾಲೋ ಕಕ್ಷೆಯನ್ನು ತಲುಪಿದೆ ಎಂದು ಉಲ್ಲೇಖಿಸಿದೆ.
ಈ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಇನ್ನೂ ವಿವಿಧ ಕ್ಷೇತ್ರಗಳ ಹಲವಾರು ಪ್ರಮುಖರು ಟ್ವೀಟ್ ಮಾಡಿ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದ್ದು, ಇಸ್ರೋಗೆ ಶುಭ ಕೋರಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…