ಬೆಂಗಳೂರು: ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ.
ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್‌ಎಲ್‌ವಿ ಮಾರ್ಕ್ 3 ‘ಬಾಹುಬಲಿ ರಾಕೆಟ್’ ಆಗಸದತ್ತ ಚಿಮ್ಮಿದೆ.
ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಉಪಗ್ರಹವನ್ನು ಚಂದ್ರನ ಮೇಲ್ಮೈಯಲ್ಲಿ ಸುಲಭವಾಗಿ ಇಳಿಸುವ 6 ವಾರಗಳ ಮಿಷನ್ ಗೆ ಅಧಿಕೃತ ಚಾಲನೆ ಸಿಕ್ಕಿದೆ.
ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ನ್ನು ಹೊಂದಿದ್ದು, ಇದು ಸುಮಾರು 3,900 ಕಿಲೋಗ್ರಾಂಗಳಷ್ಟು ಭಾರವನ್ನು ಹೊಂದಿದೆ.
ಈ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಮಾತ್ರವಲ್ಲದೇ ಈ ಬಾರಿ ಮುಂಬೈನ ಪೊವಾಯಿ ಮತ್ತು ಕೊಯಮತ್ತೂರಿನಲ್ಲಿರುವ ಲಾರ್ಸೆನ್ ಮತ್ತು ಟೂಬ್ರೊ ಕಾರ್ಖಾನೆಯ ಕೆಲಸಗಾರರೂ ಸಾಥ್ ನೀಡಿದ್ದಾರೆ.
ದಾವಣಗೆರೆ : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…
ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…
ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…
ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…
೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…