BREAKING NEWS

ಇಸ್ರೋದ ಐತಿಹಾಸಿಕ ಚಂದ್ರಯಾನ-3 ಉಡಾವಣೆ ಯಶಸ್ವಿ: ನಿಗದಿತ ಕಕ್ಷೆ ಸೇರಿದ ನೌಕೆ

ಬೆಂಗಳೂರು: ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ.

ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್‌ಎಲ್‌ವಿ ಮಾರ್ಕ್ 3 ‘ಬಾಹುಬಲಿ ರಾಕೆಟ್’ ಆಗಸದತ್ತ ಚಿಮ್ಮಿದೆ.

ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಉಪಗ್ರಹವನ್ನು ಚಂದ್ರನ ಮೇಲ್ಮೈಯಲ್ಲಿ ಸುಲಭವಾಗಿ ಇಳಿಸುವ 6 ವಾರಗಳ ಮಿಷನ್ ಗೆ ಅಧಿಕೃತ ಚಾಲನೆ ಸಿಕ್ಕಿದೆ.

ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ನ್ನು ಹೊಂದಿದ್ದು, ಇದು ಸುಮಾರು 3,900 ಕಿಲೋಗ್ರಾಂಗಳಷ್ಟು ಭಾರವನ್ನು ಹೊಂದಿದೆ.

ಈ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಮಾತ್ರವಲ್ಲದೇ ಈ ಬಾರಿ ಮುಂಬೈನ ಪೊವಾಯಿ ಮತ್ತು ಕೊಯಮತ್ತೂರಿನಲ್ಲಿರುವ ಲಾರ್ಸೆನ್ ಮತ್ತು ಟೂಬ್ರೊ ಕಾರ್ಖಾನೆಯ ಕೆಲಸಗಾರರೂ ಸಾಥ್ ನೀಡಿದ್ದಾರೆ.

andolanait

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

7 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

20 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

20 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

20 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

21 hours ago