Mysore
26
broken clouds
Light
Dark

ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿಯಾಗಿದೆ. ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳ್ಳಂಬೆಳಗ್ಗೆ ನಗರದ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.

ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ.

ತೆರಿಗೆ ವಂಚನೆ ಸಂಬಂಧ ಕಳೆದ ವಾರ ಚಿನ್ನದ ವ್ಯಾಪಾರಿಗಳ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಪತ್ತೆಯಾದ ಹಲವಾರು ದಾಖಲಾತಿ ಆಧಾರದ ಮೇಲೆ ಇದೀಗ ಮತ್ತೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.

ಅಕ್ಟೋಬರ್ 6 ರಂದು ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡಗಳು ರಾತ್ರೋರಾತ್ರಿ ಚೆನ್ನೈ, ದೆಹಲಿಯಿಂದ ಬಂದಿದ್ದ ತಂಡ ಬೆಂಗಳೂರಿನ ಹಲವೆಡೆ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆಗಳ ಮೇಲೆ ದಾಳಿ ನಡೆಸಿತ್ತು.

ಇನ್ನು ತೆರಿಗೆ ವಂಚನೆ ಆರೋಪಡಿ ಮೊನ್ನೇ ಅಷ್ಟೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿರಿಯಾನಿ ಸೆಂಟರ್​ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು. ದಾಳಿ ವೇಳೆ ಬಿರಿಯಾನಿ ಸೆಂಟರ್​ಗಳ 30 ಯುಪಿಐ ವಿವಿಧ ಖಾತೆಗಳು ಪತ್ತೆಯಾಗಿದ್ದರು. ಅಲ್ಲದೇ .ಮಾಲೀಕರ ಮನೆಯಿಂದ 1.47 ಕೋಟಿ ರೂಪಾಯಿ ನಗದು ಸಿಕ್ಕಿತ್ತು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ