ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿಯಾಗಿದೆ. ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳ್ಳಂಬೆಳಗ್ಗೆ ನಗರದ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.
ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ.
ತೆರಿಗೆ ವಂಚನೆ ಸಂಬಂಧ ಕಳೆದ ವಾರ ಚಿನ್ನದ ವ್ಯಾಪಾರಿಗಳ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಪತ್ತೆಯಾದ ಹಲವಾರು ದಾಖಲಾತಿ ಆಧಾರದ ಮೇಲೆ ಇದೀಗ ಮತ್ತೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
ಅಕ್ಟೋಬರ್ 6 ರಂದು ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡಗಳು ರಾತ್ರೋರಾತ್ರಿ ಚೆನ್ನೈ, ದೆಹಲಿಯಿಂದ ಬಂದಿದ್ದ ತಂಡ ಬೆಂಗಳೂರಿನ ಹಲವೆಡೆ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ ಮನೆಗಳ ಮೇಲೆ ದಾಳಿ ನಡೆಸಿತ್ತು.
ಇನ್ನು ತೆರಿಗೆ ವಂಚನೆ ಆರೋಪಡಿ ಮೊನ್ನೇ ಅಷ್ಟೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿರಿಯಾನಿ ಸೆಂಟರ್ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು. ದಾಳಿ ವೇಳೆ ಬಿರಿಯಾನಿ ಸೆಂಟರ್ಗಳ 30 ಯುಪಿಐ ವಿವಿಧ ಖಾತೆಗಳು ಪತ್ತೆಯಾಗಿದ್ದರು. ಅಲ್ಲದೇ .ಮಾಲೀಕರ ಮನೆಯಿಂದ 1.47 ಕೋಟಿ ರೂಪಾಯಿ ನಗದು ಸಿಕ್ಕಿತ್ತು.
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…