ಬೆಂಗಳೂರು : ‘ಬಿಜೆಪಿಯವರು ತಮ್ಮ ಒಬ್ಬೊಬ್ಬ ಅಭ್ಯರ್ಥಿಗೆ ₹ 10 ಕೋಟಿ ಕೊಡುತ್ತಿದ್ದಾರೆ. ಅವರು ಈ ಹಣ ಸಾಗಿಸಲು ಐಟಿ, ಇ.ಡಿ ರಕ್ಷಣೆ ಪಡೆಯುತ್ತಾರೆ’ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಆರೋಪಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಜೆಪಿಯವರು ಪೊಲೀಸ್ ವಾಹನದಲ್ಲೇ ಹಣ ಸಾಗಿಸಬಹುದು’ ಎಂದು ಅವರು ಹೇಳಿದರು.‘ಕಳೆದ ಚುನಾವಣೆ ವೇಳೆ ಯಾರ ಮೇಲೆ ಐಟಿ, ಇಡಿ ದಾಳಿ ನಡೆದಿದೆ ಎನ್ನುವುದನ್ನು ನೋಡಿದ್ದೇವೆ. ಐಟಿ, ಇ.ಡಿ ದಾಳಿ ಕೇವಲ ಕಾಂಗ್ರೆಸ್, ಜೆಡಿಎಸ್ ನಾಯಕರ ಮೇಲೆ ಮಾತ್ರ ನಡೆಯುತ್ತದೆ’ ಎಂದು ದೂರಿದ ಅವರು, ‘ಬಿಜೆಪಿ ಅಭ್ಯರ್ಥಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು ಎಲ್ಲೂ ಕಾಣಿಸಲೇ ಇಲ್ಲ’ ಎಂದರು ‘ಐಟಿ, ಇ.ಡಿ ಬಿಜೆಪಿ ಪ್ರೈವೇಟ್ ಡಿಪಾರ್ಟ್‌ಮೆಂಟ್ ಆಗಿದೆ. ಸೋಲುವ ಭೀತಿಯಿಂದ ವಿರೋಧ ಪಕ್ಷಗಳ ಅಭ್ಯರ್ಥಿಗಳ ಮೇಲೆ ದಾಳಿ ನಡೆಸಿ ಕೆಟ್ಟ ಹೆಸರು ಬರುವಂತೆ ಬಿಜೆಪಿಯವರು ಮಾಡುತ್ತಾರೆ. ಆ ಮೂಲಕ, ಅಭ್ಯರ್ಥಿಗಳನ್ನು ಮಾನಸಿಕವಾಗಿ ಕುಗ್ಗು ವಂತೆ ಮಾಡುತ್ತಾರೆ’ ಎಂದೂ ಹೇಳಿದರು.
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…
ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…
ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…