ನ್ಯೂಯಾರ್ಕ್ : ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಜಮ್ಮು ಕಾಶ್ಮೀರದ ವಿಷಯ ಪ್ರಸ್ತಾಪ ಮಾಡಿದ ಪಾಕಿಸ್ತಾನಕ್ಕೆ ಭಾರತ ಸೂಕ್ತ ರೀತಿಯಲ್ಲಿ ತಿರುಗೇಟು ನೀಡಿದೆ. ಭಾರತದ ಆಂತರಿಕ ವಿಷಯಗಳಲ್ಲಿ ಪಾಕಿಸ್ತಾನ ಮೂಗು ತೂರಸದೆ ಇರುವುದು ಒಳಿತು ಎಚ್ಚರಿಕೆ ಸಂದೇಶ ರವಾನಿಸಿದೆ.
ವಿಶ್ವಸಂಸ್ಥೆಯಲ್ಲಿನ ಭಾರತದ ಮಿಷನ್‍ನ ಸಲಹೆಗಾರರಾದ ಆರ್ ಮಧು ಸೂದನ್ ಪ್ರತಿಕ್ರಿಯೆ ನೀಡಿ, ಭಯೋತ್ಪಾದಕರಿಗೆ ಆಶ್ರಯ ನೀಡುವ ದೇಶದೊಂದಿಗೆ ಗುರುತಿಸಿಕೊಳ್ಳುವ ಅಗತ್ಯವಿಲ್ಲ ಎಂದು ನೇರವಾಗಿ ಪಾಕಿಸ್ತಾನಕ್ಕೆ ತಿರುಗೇಟು ನೀಡಿದ್ದಾರೆ.
ನಿಮ್ಮ ದೇಶದ ಸ್ವಂತ ವಿಷಯಗಳ ಬಗ್ಗೆ ಗಮನ ಹರಿಸಿ ಭಾರತದ ವಿಷಯಗಳ ಬಗ್ಗೆ ನಿಮಗೆ ಕಾಳಜಿ ಬೇಡ. ನಿಮ್ಮ ಸಮಸ್ಯೆಯನ್ನು ನೀವು ಸರಿ ಪಡಿಸಿಕೊಳ್ಳಿ ಎಂದಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ಸಮಸ್ಯೆ ಪ್ರಸ್ತಾಪ ಮಾಡುವ ಬದಲು ತನ್ನ ಆಂತರಿಕ ವ್ಯವಹಾರಗಳ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಲು ಮತ್ತು ತಮ್ಮದೇ ಆದ ಗಡಿಗಳನ್ನು ಪುನಃಸ್ಥಾಪಿಸಿ ಎಂದು ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ.
ಸಶಸ್ತ್ರ ಸಂಘರ್ಷದಲ್ಲಿ ನಾಗರಿಕರ ರಕ್ಷಣೆ’ ಕುರಿತು ಮುಕ್ತ ಚರ್ಚೆಯಲ್ಲಿ ಮಾತ£ ಆರ್ ಮಧು ಸೂದನ್, “ಈ ಮಂಡಳಿಯ ಸಮಯವನ್ನು ಉತ್ತಮವಾಗಿ ಬಳಸಿಕೊಳ್ಳಲು, ಸಂಬಂಧಪಟ್ಟ ನಿಯೋಗ ಅವರ ಆಂತರಿಕ ವಿಷಯಗಳನ್ನು ಪರಿಹರಿಸಲು ಮತ್ತು ಮರುಸ್ಥಾಪಿಸಲು ಕೇಂದ್ರೀಕರಿಸಲು ಸಲಹೆ ನೀಡುತ್ತೇನೆ ಎಂದಿದ್ದಾರೆ.
ನನ್ನ ದೇಶದ ವಿರುದ್ಧ ಕ್ಷುಲ್ಲಕ ಆರೋಪಗಳನ್ನು ಮಾಡುವುದಕ್ಕಿಂತ ಪಾಕಿಸ್ತಾನ ಅವರ ಸ್ವಂತ ಗಡಿ ರಕ್ಷಣೆ ಮಾಡಿಕೊಳ್ಳಲು ಗಮನ ಹರಿಸುವುದು ಉತ್ತಮ ಎಂದು ಕಿವಿಮಾತು ಹೇಳಿದ್ದಾರೆ.
ಆಹಾರ ಅಭದ್ರತೆಯ ಕುರಿತಾದ ಯುಎನ್‍ಎಸ್‍ಸಿಯ ಮುಕ್ತ ಚರ್ಚೆಯಲ್ಲಿ ಪಾಕಿಸ್ತಾನದ ಪ್ರತಿನಿಧಿಯೊಬ್ಬರು ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ. “ದುರದೃಷ್ಟವಶಾತ್, ಆಹಾರ ಭದ್ರತೆಯ ಪ್ರಮುಖ ವಿಷಯದಿಂದ ಈ ಮಂಡಳಿಯ ಗಮನವನ್ನು ಬೇರೆಡೆಗೆ ತಿರುಗಿಸಲು ನಿಯೋಗ ಮತ್ತೊಮ್ಮೆ ವೇದಿಕೆಯನ್ನು ದುರುಪಯೋಗಪಡಿಸಿಕೊಂಡಿರುವುದನ್ನು ನೋಡಿದ್ದೇವೆ” ಎಂದು ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…