BREAKING NEWS

ದಾರಿ ತಪ್ಪಿರುವುದು ರಾಜ್ಯದ ಹೆಣ್ಣು ಮಕ್ಕಳಲ್ಲ ನಿಮ್ಮ ಮಗ : ಕೃಷ್ಣ ಭೈರೇಗೌಡ !

ಬೆಂಗಳೂರು : ಕುಮಾರಸ್ವಾಮಿ ಅವರೆ ದಾರಿ ತಪ್ಪಿರುವುದು ರಾಜ್ಯದ ಹೆಣ್ಣು ಮಕ್ಕಳಲ್ಲ ನಿಮ್ಮ ಮನೆಯ ಮಗ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ನೀಡಿದ್ದ ʼರಾಜ್ಯದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆʼ ಎಂಬ ಹೇಳಿಕೆಗೆ ಮರುತ್ತರ ನಿಡಿರುವ ಅವರು ರಾಜ್ಯದಲ್ಲಿ ದಾರಿ ತಪ್ಪಿರುವುದು ಹೆಣ್ಣು ಮಕ್ಕಳಲ್ಲ ನಿಮ್ಮ ಮನೆಯ ಮಗ ಎಂದಿದ್ದಾರೆ.

ಅಮಾಯಕ ಮಹಿಳೆಯರನ್ನು ನೀವು ಹೀಗೆ ಶೋಷಣೆ ಮಾಡಿ, ಅವ ಅಮಾಯಕತನ, ಬಡತನ ಹಾಗೂ ಕಷ್ಟದ ಪರಿಸ್ಥಿತಿಯ ಲಾಭ ತೆಗೆದುಕೊಂಡು ಇಡೀ ಪ್ರಪಂಚದ ದೊಡ್ಡ ಲೈಂಗಿಕ ಹಗರಣ ಮಾಡಿದ್ದೀರ. ಈಗ ಹೇಳಿ ಯಾರು ದಾರಿ ತಪ್ಪಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಮಾಜಿ ಪ್ರಧಾನಿ ಹೆಚ್‌.ಡಿ.ದೇವೆಗೌಡ ಅವರೆ, ಕುಮಾರಸ್ವಾಮಿ ಅವರೆ, ಭವಾನಿ ರೇವಣ್ಣ ಅವರೆ ರಾಜ್ಯದ ಜನತೆಗೆ ಉತ್ತರ ನೀಡಿ. ನಿಮ್ಮ ಮನೆಯಲ್ಲಿ ನಡೆಯುತ್ತಿರುವ ಈ ಕೃತ್ಯಕ್ಕೆ ಬೆಂಬಲ ನೀಡುವ ಮೂಲಕ ಈ ಪ್ರಕರಣದಲ್ಲಿ ನೀವು ಭಾಗಿಯಾಗಿದ್ದೀರಿ ಎಂದು ಆರೋಪಿಸಿದರು.

 

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

3 mins ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

10 mins ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

13 mins ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

19 mins ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

50 mins ago

ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆ : ಓರ್ವ ಬಂಧನ

ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ…

1 hour ago