ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಕೆಲ ಕ್ಷೇತ್ರಗಳಲ್ಲಿ ನಮ್ಮ ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ ಅಂತಾ ನನಗೆ ಅನಿಸುತ್ತಿದೆ. ಆದರೆ, ಇದನ್ನು ಈಗ ಮಾತನಾಡಿದರೆ ನಾವು ಬೆಂಕಿ ಹಚ್ಚಿದಂತೆ ಆಗುತ್ತದೆ ಎಂದು ಮಾಜಿ ಸಚಿವ ಸಿ.ಪಿ.ಯೋಗೀಶ್ವರ್ ಹೇಳಿದ್ದಾರೆ.
ಈ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಸಂಸದ ಪ್ರತಾಪ್ ಸಿಂಹ ಬಳಿಕ “ಹೊಂದಾಣಿಕೆ ರಾಜಕೀಯ’ದ ಬಗ್ಗೆ ಸಿಪಿವೈ ಕಿಡಿಕಾರಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದ ಆಡಳಿತ ವ್ಯವಸ್ಥೆ ಸರಿಯಾಗಿರಲಿಲ್ಲ. ಸಚಿವ ಸಂಪುಟ ವಿಸ್ತರಣೆ ಮಾಡಲಿಲ್ಲ, ಸಚಿವ ಸ್ಥಾನಗಳನ್ನು ಖಾಲಿ ಬಿಡಲಾಯಿತು. ಇದರಿಂದ ಪಕ್ಷದಲ್ಲಿ ಆಂತರಿಕ ಬೇಗುದಿ ಸೃಷ್ಟಿಯಾಯಿತು ಎಂದರು.
ಅದಲ್ಲದೇ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲೂ ಹೊಂದಾಣಿಕೆಯಾಗಿದೆ. ಇದರ ಜೊತೆಗೆ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಹಾಕುವ ಪ್ರಯತ್ನ ನಡೆಯಲೇ ಇಲ್ಲ. ಈ ಎಲ್ಲ ಅಂಶಗಳು ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿದೆ. ನಮ್ಮ ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಅನಿಸಿದೆ. ಅದರ ಬಗ್ಗೆ ಮಾತನಾಡಿದರೆ ಈಗ ಬೆಂಕಿ ಹಚ್ಚಿದಂತೆ ಆಗಲಿದೆ. ಈ ಬಗ್ಗೆ ಈಗ ಚರ್ಚೆ ಅನಗತ್ಯ. ಮುಂದಿನ ಚುನಾವಣೆ ಬಗ್ಗೆ ಯೋಚನೆ ಮಾಡಬೇಕು ಎಂದು ಹೇಳಿದರು.
ಲೋಕಸಭಾ ಚುನಾವಣೆಗೆ ಸ್ಪರ್ಧೆ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎನ್ನುವ ಯೋಚನೆ ನನಗೆ ಇದೆ. ಆದರೆ, ಅದು ಇನ್ನೂ ಅಂತಿಮವಾಗಿಲ್ಲ. ಅಂತಿಮವಾಗಿ ಎಲ್ಲವನ್ನೂ ಪಕ್ಷ ತೀರ್ಮಾನ ಮಾಡಲಿದೆ. ನಾನು ದಿಲ್ಲಿಯಲ್ಲಿ ಕೆಲವು ಪ್ರಮುಖ ನಾಯಕರನ್ನು ಭೇಟಿ ಮಾಡಿದ್ದು, ಲೋಕಸಭಾ ಚುನಾವಣೆಯ ಬಗ್ಗೆಯೂ ಚರ್ಚೆ ಮಾಡಿದ್ದೇನೆ ಎಂದು ಹೇಳಿದರು.
ರಾಜಕೀಯ ಸಾಕಾಗಿದೆ ಎಂದ ಸಂಸದ ಡಿಕೆ ಸುರೇಶ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಚುನಾವಣಾ ರಾಜಕೀಯದ ಬಗ್ಗೆ ಡಿಕೆ ಸುರೇಶ್ ಯಾಕೆ ವೈರಾಗ್ಯದ ಮಾತುಗಳನ್ನು ಆಡಿದ್ದಾರೆ ಎಂಬುದು ಗೊತ್ತಿಲ್ಲ. ಅಷ್ಟು ಸುಲಭವಾಗಿ ರಾಜಕೀಯ ಬಿಡುವ ವ್ಯಕ್ತಿ ಅವರಲ್ಲ. ಡಿ.ಕೆ. ಸುರೇಶ್ ಅವರ ಹೇಳಿಕೆ ಹಿಂದೆ ಗೂಡಾರ್ಥ ಇದೆ. ಅವರ ಅಣ್ಣ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಲು ಪ್ರಯತ್ನಿಸಿರಬೇಕು. ದಿಲ್ಲಿಗಿಂತ ಕರ್ನಾಟಕದಲ್ಲಿ ಸಕ್ರಿಯರಾಗಲು ನಿರ್ಧರಿಸಿರಬೇಕು ಅನಿಸುತ್ತದೆ ಎಂದರು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…