ಕಲಬುರಗಿ : ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಬೆಂಬಲಿಗ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅರವಿಂದ್ ಚೌಹಾಣ್ ಮನೆ, ಹೋಟೆಲ್, ಕ್ರಷರ್ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದು ಈ ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕಾಂಗ್ರೆಸ್ನಲ್ಲಿ ಸಕ್ರಿಯರಾಗಿಬಿಟ್ಟರೆ ತೊಂದರೆ ಕೊಡುತ್ತೇವೆ ಅನ್ನೋ ಸಂದೇಶ ನೀಡಲು ಅರವಿಂದ್ ಚೌಹಾಣ್ ಮನೆ ಮೇಲೆ ಐಟಿ ದಾಳಿ ನಡೆದಿದೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.
ಇನ್ನು ಅರವಿಂದ್ ಚೌಹಾಣ್ ಪ್ರತಿಕ್ರಿಯೆ ನೀಡಿದ್ದು ಬಿಜೆಪಿ ಕೀಳು ಮಟ್ಟಕ್ಕೆ ಇಳಿದು, ಐಟಿ ದಾಳಿ ನಡೆಸಿದೆ. ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿರುವುದಕ್ಕೆ ಐಟಿ ರೇಡ್ ಮಾಡಲಾಗಿದೆ. ಬಿಜೆಪಿ ಸಿದ್ಧಾಂತಗಳನ್ನು ಮಾರಿಕೊಂಡಿದೆ ಎಂದು ಆಕ್ರೋಶ ಹೊರಹಾಕಿದ್ರು. ಕಲಬುರಗಿ ನಗರದಲ್ಲಿ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಕೂಡ ಘಟನೆ ಸಂಬಂಧ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಚುನಾವಣೆ ಸೋಲ್ತಾರೆ. ಸೋಲುವ ಭಯ ಆರಂಭವಾದಾಗ ಸರ್ಕಾರಿ ಏಜನ್ಸಿಗಳನ್ನು ಬಳಕೆ ಮಾಡ್ತಾರೆ. ಕಲಬುರಗಿ ಜಿಲ್ಲೆಯಲ್ಲಿ ಕೂಡಾ ಐಟಿ ಅಸ್ತ್ರ ಬಳಸಿದ್ದಾರೆ. ಕಾಂಗ್ರೆಸ್ ಬೆಂಬಲಿಗರು, ಕಾರ್ಯಕರ್ತರ ಮನೆ ಮೇಲೆ ಐಟಿ ದಾಳಿ ನಡೆದಿದೆ. ವಾಹೀದ್ ಅಲಿ, ಮಹಮ್ಮದ್ ಜಾಗೀರದಾರ್, ಅರವಿಂದ್ ಚೌಹಾಣ್ ಮನೆ ಮೇಲೆ ಐಟಿ ದಾಳಿ ನಡೆದಿದೆ ಎಂದು ಬಿಜೆಪಿ ವಿರುದ್ಧ ಗರಂ ಆದರು
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…